ಗುಜರಾತ್ ವಿವಿ ಹಾಸ್ಟೆಲ್‌ನಲ್ಲಿ ನಮಾಜ್ ಮಾಡುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಪ್ರಕರಣ: ಇಬ್ಬರ ಬಂಧನ - Mahanayaka

ಗುಜರಾತ್ ವಿವಿ ಹಾಸ್ಟೆಲ್‌ನಲ್ಲಿ ನಮಾಜ್ ಮಾಡುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಪ್ರಕರಣ: ಇಬ್ಬರ ಬಂಧನ

17/03/2024


Provided by

ಗುಜರಾತ್ ವಿಶ್ವವಿದ್ಯಾಲಯದ ಹಾಸ್ಟೆಲ್‌ನಲ್ಲಿ ನಮಾಜ್ ಮಾಡುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಹಮದಾಬಾದ್ ಪೊಲೀಸರು ಭಾನುವಾರ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಗುಜರಾತ್ ನ ಗುಜರಾತ್ ವಿಶ್ವವಿದ್ಯಾಲಯದ ಹಾಸ್ಟೆಲ್‌ನಲ್ಲಿ ನಮಾಜ್ ಮಾಡುತ್ತಿದ್ದ ವಿದೇಶಿ ವಿದ್ಯಾರ್ಥಿಗಳ ಮೇಲೆ ಗುಂಪೊಂದು ಹಲ್ಲೆ ನಡೆಸಿದ ಘಟನೆ ಶನಿವಾರ ನಡೆದಿತ್ತು.
ಎಎನ್ಐ ಜೊತೆ ಮಾತನಾಡಿದ ವಲಯ 7 ಡಿಸಿಪಿ ತರುಣ್ ದುಗ್ಗಲ್, 20-25 ಜನರ ಗುಂಪಿನ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಮತ್ತು ಆರೋಪಿಗಳನ್ನು ಬಂಧಿಸಲು 9 ತಂಡಗಳನ್ನು ರಚಿಸಲಾಗಿದೆ ಎಂದು ಹೇಳಿದರು.

ಅಹ್ಮದಾಬಾದ್ ಕ್ರೈಂ ಬ್ರಾಂಚ್ ಪೊಲೀಸರು ಬಂಧಿಸಿರುವ ಇಬ್ಬರು ಆರೋಪಿಗಳೆಂದರೆ ಹಿತೇಶ್ ಮೇವಾಡಾ ಮತ್ತು ಭರತ್ ಪಟೇಲ್ ಎಂಬುವವರಾಗಿದ್ದಾರೆ.

ನಿನ್ನೆ ರಾತ್ರಿ 10.30 ಕ್ಕೆ ಗುಜರಾತ್ ವಿಶ್ವವಿದ್ಯಾಲಯದಲ್ಲಿ ನಡೆದ ಘಟನೆಯಲ್ಲಿ 20-25 ಜನರ ಗುಂಪಿನ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಆರೋಪಿಗಳನ್ನು ಬಂಧಿಸಲು ಒಂಬತ್ತು ತಂಡಗಳನ್ನು ರಚಿಸಲಾಗಿದೆ. ಈ ಇಬ್ಬರು ಆರೋಪಿಗಳಾದ ಹಿತೇಶ್ ಮೇವಾಡಾ ಮತ್ತು ಭರತ್ ಪಟೇಲ್ ಅವರನ್ನು ಬಂಧಿಸಲಾಗಿದೆ. ಉಳಿದ ಆರೋಪಿಗಳನ್ನು ಬಂಧಿಸಲು ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಡಿಸಿಪಿ ದುಗ್ಗಲ್ ತಿಳಿಸಿದ್ದಾರೆ.

ಶನಿವಾರ ಅಹ್ಮದಾಬಾದ್ ನ ಗುಜರಾತ್ ವಿಶ್ವವಿದ್ಯಾಲಯದ ಹಾಸ್ಟೆಲ್ ಆವರಣದಲ್ಲಿ ನಮಾಜ್ ಮಾಡುತ್ತಿದ್ದಾಗ ಅಪರಿಚಿತ 20-25 ಜನರ ಗುಂಪು ವಿದೇಶಿ ವಿದ್ಯಾರ್ಥಿಗಳ ಗುಂಪಿನ ಮೇಲೆ ಹಲ್ಲೆ ನಡೆಸಿ, ಕಲ್ಲು ತೂರಾಟ ನಡೆಸಿ ಹಾಸ್ಟೆಲ್ ಕೊಠಡಿಗಳನ್ನು ಧ್ವಂಸಗೊಳಿಸಿದೆ ಎಂದು ಆರೋಪಿಸಲಾಗಿದೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ