ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ: ಮೂವರ ದುರ್ಮರಣ - Mahanayaka
8:55 AM Wednesday 15 - October 2025

ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ: ಮೂವರ ದುರ್ಮರಣ

kapu
21/03/2022

ಕಾಪು: ಸಮೀಪದ ಫಕೀರ್ನಕಟ್ಟೆಯಲ್ಲಿದ್ದ ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮೂವರು ಸಜೀವ ದಹನಗೊಂಡ ದಾರುಣ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.


Provided by

ರಜಾಕ್ ಮಲ್ಲಾರ್,  ಅಂಗಡಿಯ ಪಾಲುದಾರರಾದ ಚಂದ್ರನಗರದ ರಜಬ್ ಹಾಗೂ ಮತ್ತೋರ್ವ ವ್ಯಕ್ತಿ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಅಂಗಡಿಯಲ್ಲಿ ಗುಜರಿಗೆ ಬಂದಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ಅವಘಡ ಸಂಭವಿಸಿದೆ ಎನ್ನಲಾಗಿದೆ. ಸ್ಫೋಟದ ತೀವ್ರತೆಗೆ ಮೂವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಗುಜರಿ ಅಂಗಡಿಯಲ್ಲಿ ಇರಿಸಲಾದ ಹಳೆಯ ಪ್ರಿಜ್ ಸೇರಿದಂತೆ ಗುಜರಿ ಸಾಮಗ್ರಿಗಳು ಬೆಂಕಿಯ ಕೆನ್ನಾಲಗೆಗೆ ಸಿಲುಕಿ ಸುಟ್ಟು ಕರಕಲಾಗಿದ್ದು, ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳು ಬೆಂಕಿಗಾಹುತಿಯಾಗಿವೆ. ಉಡುಪಿ ಅಗ್ನಿ ಶಾಮಕದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು, ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಭೀಕರ ಅಪಘಾತ ಖ್ಯಾತ ನಟಿ ಡಾಲಿ ಡಿಕ್ರೂಜ್ ಸೇರಿದಂತೆ ಮೂವರ ದಾರುಣ ಸಾವು!

‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಬಗ್ಗೆ ಪ್ರಕಾಶ್ ರಾಜ್ ಹೇಳಿಕೆ ವೈರಲ್!

ರಾಜಕೀಯ ನಿವೃತ್ತಿಯ ಸುಳಿವು ನೀಡಿದ ಹಿರಿಯ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್

ರೈಲ್ವೇ ನಿಲ್ದಾಣದ ಶೌಚಾಲಯದಲ್ಲಿ ಯುವತಿ ಮೇಲೆ ಅತ್ಯಾಚಾರ

ಇತ್ತೀಚಿನ ಸುದ್ದಿ