ಪತ್ನಿಯನ್ನು ಕೊಂದು ವಿಡಿಯೋ ಸಂದೇಶ ಕಳುಹಿಸಿ ಸಾವಿಗೆ ಶರಣಾದ ಟೆಕ್ಕಿ!

ಗುರುಗ್ರಾಮ: ಸಾಫ್ಟ್‌ವೇರ್ ಎಂಜಿನಿಯರ್ ಒಬ್ಬ ತನ್ನ ಪತ್ನಿಯನ್ನು ಕೊಂದು ಸ್ನೇಹಿತನಿಗೆ ವಿಡಿಯೋ ಸಂದೇಶ ಕಳುಹಿಸಿ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ.
ಉತ್ತರ ಪ್ರದೇಶದ ಪ್ರಯಾಗ್‌ರಾಜ್ ನಿವಾಸಿ ಅಜಯ್ ಕುಮಾರ್ (30) ಪಶ್ಚಿಮ ಬಂಗಾಳದ ಅಸನ್ಸೋಲ್ ನಿವಾಸಿ ಸ್ವೀಟಿ ಶರ್ಮಾ (28) ಮೂರು ವರ್ಷಗಳ ಹಿಂದೆ ವಿವಾಹವಾಗಿದ್ದರು. ಇಬ್ಬರೂ ಗುರುಗ್ರಾಮದ ಐಟಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದರು.
ಭಾನುವಾರ ಮಧ್ಯಾಹ್ನ 3.15ಕ್ಕೆ ಕುಮಾರ್ ತನ್ನ ಸ್ನೇಹಿತನಿಗೆ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಿಡಿಯೋ ಸಂದೇಶ ಕಳುಹಿಸಿದ್ದಾನೆ. ಈ ಹಿನ್ನೆಲೆ ಪೊಲೀಸರು ಸೆಕ್ಟರ್ 37 ವಸತಿ ಸೊಸೈಟಿಯಲ್ಲಿರುವ ಫ್ಲಾಟ್ ಗೆ ಆಗಮಿಸಿದ ವೇಳೆ ಶರ್ಮಾಳ ಮೃತದೇಹ ಸ್ಕಾರ್ಫ್ ನಿಂದ ಕತ್ತು ಹಿಸುಕಿ ಕೊಂದ ಸ್ಥಿತಿಯಲ್ಲಿ ಪತ್ತೆಯಾಗಿದ್ದರೆ. ಕುಮಾರ್ನ ಶವ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಕುಮಾರ್ ತನ್ನ ಪತ್ನಿಯನ್ನು ಕೊಂದಿದ್ದಾನೆ ಎಂದು ತೋರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ಆದಾಗ್ಯೂ, ಎರಡೂ ಘಟನೆಗಳ ಹಿಂದಿನ ಕಾರಣ ಇನ್ನೂ ಪತ್ತೆಯಾಗಿಲ್ಲ. ಮಹಿಳೆಯ ಕುಟುಂಬವು ಕೊಲೆ ಆರೋಪ ಹೊರಿಸಿದ್ದು, ಕುಮಾರ್ ವಿರುದ್ಧ ದೂರು ದಾಖಲಿಸಿದೆ. ಘಟನೆಗೂ ಮುನ್ನ ದಂಪತಿಗಳ ನಡುವೆ ಜಗಳ ನಡೆದಿರುವ ಶಂಕೆ ವ್ಯಕ್ತವಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD