ಗುರುಪ್ರಸಾದ್ ಈ ಸ್ಥಿತಿಗೆ ಬರಲು ಈ ಎರಡು ವಿಷಯಗಳೇ ಕಾರಣ: ಜಗ್ಗೇಶ್ ಹೇಳಿದ್ದೇನು?
ಗುರುಪ್ರಸಾದ್ ಮನಸ್ಸು ಮಾಡಿದ್ದರೆ ಏನನ್ನಾದರೂ ಸಾಧಿಸಬಹುದಿತ್ತು. ಬಹಳ ಒಳ್ಳೆಯ ನಿರ್ದೇಶಕ, ಪ್ರತಿಭಾಶಾಲಿ ಅವರ ಬರವಣಿಗೆ ಶೈಲಿ ಬಹಳ ಭಿನ್ನವಾಗಿತ್ತು. ಆದರೆ ಮದ್ಯ ಮತ್ತು ಅಹಂ ಇಲ್ಲದೇ ಹೋಗಿದ್ದರೆ, ಗುರುಪ್ರಸಾದ್ ರಾಜ್ಯದ ನಂಬರ್ 1 ನಿರ್ದೇಶಕ ಆಗಿರುತ್ತಿದ್ದರು ಎಂದು ನಟ ಜಗ್ಗೇಶ್ ಹೇಳಿದ್ದಾರೆ.
ನಟ, ನಿರ್ದೇಶಕ ಗುರುಪ್ರಸಾದ್ ಅವರ ನಿಧನದ ಹಿನ್ನೆಲೆ ಮಾತನಾಡಿದ ಅವರು, ಮಠ ಸಿನಿಮಾ ಸಂದರ್ಭದಲ್ಲಿ ಗುರುಪ್ರಸಾದ್ ಸೆಟ್ಟಿಗೆ ಬರುವಾಗ ನಾಲ್ಕಾದರೂ ಪುಸ್ತಕಗಳು ಅವರ ಬ್ಯಾಗ್ ನಲ್ಲಿ ಇರುತ್ತಿತ್ತು. ಆದರೆ ಕೊನೆ ಕೊನೆಗೆ ಅವರ ಬ್ಯಾಗಿನಲ್ಲಿ ಮದ್ಯದ ಬಾಟಲಿಗಳು ಇರುತ್ತಿದ್ದವು. ಬೆಳಗ್ಗಿನಿಂದ ಸಂಜೆಯವರೆಗೂ ಅವರಿಂದ ಮದ್ಯದ ವಾಸನೆ ಹೋಗುತ್ತಿರಲಿಲ್ಲ ಎಂದು ಜಗ್ಗೇಶ್ ಹೇಳಿದ್ದಾರೆ.
ಇದರ ಜೊತೆಗೆ ಅಹಂ, ಸಿಟ್ಟು ಸಹ ಹೆಚ್ಚಿಗೆ ಇತ್ತು. ನನಗೆ ಸರಿ ಅನಿಸಿದ್ದನ್ನಷ್ಟೆ ಮಾಡುವೆ, ಯಾರ ಮಾತು ಕೇಳುವುದಿಲ್ಲ ಎಂಬ ಅಹಂ ಅವರಲ್ಲಿ ಹೆಚ್ಚಿಗೆ ಇತ್ತು. ನಾನು ಅವರು ಸುಮಾರು ಹತ್ತು ವರ್ಷ ದೂರಾಗಿಬಿಟ್ಟಿದ್ದೆವು. ಆತನ ಜಗಳದ ಗುಣ ನನಗೆ ಇಷ್ಟವಾಗಿರಲಿಲ್ಲ. ಆ ನಂತರ ಕೆಲವು ಆಪ್ತರು ನಮ್ಮನ್ನು ಒಟ್ಟಿಗೆ ಕೆಲಸ ಮಾಡಲು ಸ್ಪೂರ್ತಿ ಕೊಟ್ಟರು, ನನ್ನ ಆತ್ಮೀಯರೆ ‘ರಂಗನಾಯಕ’ ಸಿನಿಮಾಕ್ಕೆ ಬಂಡವಾಳ ಹಾಕಿದರು.
ನಿರ್ಮಾಪಕರು, ಗುರುಗೆ 90 ಲಕ್ಷ ಹಣ ಕೊಟ್ಟರು. ಅಷ್ಟೆಲ್ಲ ಮಾಡಿದರೂ ಸಹ ಗುರು ಅದಕ್ಕೆ ಗೌರವ ಕೊಡಲಿಲ್ಲ. ನನ್ನನ್ನು ಸೆಟ್ ಗೆ ಎರಡು ಗಂಟೆಗೆ ಕರೆಸಿಕೊಂಡರೆ ಆತ ನಾಲ್ಕು ಗಂಟೆಗೆ ಬರುತ್ತಿದ್ದ. ಬಂದಾಗಲೂ ಸಹ ಮದ್ಯದ ವಾಸನೆ ಹೋಗಿರುತ್ತಿರಲಿಲ್ಲ, ಸೆಟ್ಗೆ ಬಂದು ಏನು ಶೂಟಿಂಗ್ ಮಾಡಬೇಕು ಎಂದು ಯೋಚಿಸುತ್ತಿದ್ದ, ಏನು ಡೈಲಾಗ್ ಇರಬೇಕು ಎಂದು ಬರೆಯುತ್ತಿದ್ದ. ಕೆಲವೊಮ್ಮೆ ನಾನೇ ಸೀನ್ ಗಳನ್ನು ಬರೆದುಕೊಟ್ಟಿದ್ದೂ ಸಹ ಇದೆ ಎಂದು ಜಗ್ಗೇಶ್ ಹೇಳಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: