ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ಹಿಂಪಡೆದಿಲ್ಲ: ಯು.ಟಿ. ಖಾದರ್ ಸ್ಪಷ್ಟನೆ - Mahanayaka
1:17 AM Thursday 10 - September 2026

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ಹಿಂಪಡೆದಿಲ್ಲ: ಯು.ಟಿ. ಖಾದರ್ ಸ್ಪಷ್ಟನೆ

u t khadar gutka.jpg
15/08/2026

ಬೆಂಗಳೂರು: ರಾಜ್ಯದಲ್ಲಿ ನಿಕೋಟಿನ್ ಯುಕ್ತ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧಕ್ಕೆ ಸಂಬಂಧಿಸಿದಂತೆ ಎದ್ದಿರುವ ಗೊಂದಲಗಳಿಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಸ್ಪಷ್ಟನೆ ನೀಡಿದ್ದು, ತಾವು ಹೊರಡಿಸಿರುವ ನಿಷೇಧ ಆದೇಶವನ್ನು ವಾಪಸ್ ಪಡೆದಿಲ್ಲ ಎಂದು ತಿಳಿಸಿದ್ದಾರೆ.

ಪಾನ್ ಮಸಾಲದಲ್ಲಿ ನಿಕೋಟಿನ್ ಇರಬಾರದು ಎಂಬ ನಿರ್ಧಾರವನ್ನು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ತೆಗೆದುಕೊಳ್ಳಲಾಗಿದ್ದು, ಇದರಿಂದ ಸ್ಥಳೀಯ ಅಡಿಕೆ ಬೆಳೆಗಾರರಿಗೆ ಹಾಗೂ ವ್ಯಾಪಾರಿಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಅವರು ಅಭಯ ನೀಡಿದ್ದಾರೆ.

ಗುಟ್ಕಾ ಹಾಗೂ ಪಾನ್ ಮಸಾಲ ತಯಾರಿಕೆಗೆ ನಮ್ಮ ದೇಶದ ಅಡಿಕೆಯನ್ನು ಯಾರೂ ಬಳಸುವುದಿಲ್ಲ, ಬದಲಿಗೆ ನೇಪಾಳ ಮತ್ತು ಬಾಂಗ್ಲಾದೇಶದಿಂದ ಆಮದು ಮಾಡಿಕೊಳ್ಳುವ ಅಡಿಕೆಯನ್ನು ಬಳಸುತ್ತಾರೆ. ಹೀಗಾಗಿ ಈ ನಿಷೇಧದಿಂದ ದೇಶೀಯ ಅಡಿಕೆ ಬೆಳೆಗಾರರಿಗೆ ಯಾವುದೇ ಸಮಸ್ಯೆಯಾಗುವುದಿಲ್ಲ ಮತ್ತು ಮುಂಬರುವ ದಿನಗಳಲ್ಲಿ ಅಡಿಕೆ ಬೆಲೆ ಕುಸಿಯುವ ಬದಲು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ನಿಷೇಧ ಕ್ರಮದಿಂದ ಅಡಿಕೆ ಬೆಳೆಗಾರರಿಗೆ ನಷ್ಟವಾಗಲಿದೆ ಎಂದು ಕೆಲವು ಶಾಸಕರು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದ ಹಿನ್ನೆಲೆಯಲ್ಲಿ ಆದೇಶ ಹಿಂಪಡೆಯುವಂತೆ ಸಿಎಂ ಸೂಚಿಸಿದ್ದರು ಎನ್ನಲಾಗಿತ್ತು. ಆದರೆ ಸಚಿವ ಯು.ಟಿ. ಖಾದರ್ ಅವರು ಜನರ ಆರೋಗ್ಯದ ಹಿತದೃಷ್ಟಿಯಿಂದ ಹೊರಡಿಸಲಾದ ಈ ಆದೇಶ ಹಿಂಪಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದು, ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೂ ಚರ್ಚಿಸಿ ವಿವರಣೆ ನೀಡಿರುವುದಾಗಿ ಹೇಳಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ

ಗ್ರೂಪ್ ಗೆ ಜಾಯಿನ್ ಆಗಿ:https://chat.whatsapp.com/H1duNIQRfXnJcfQKWPzNqD

 

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti