ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಕೇಸ್: ಮಾಜಿ ಸಚಿವ ಈಶ್ವರಪ್ಪ ಅವರಿಗೆ ಮತ್ತೆ ಸಂಕಷ್ಟ!

eshwarappa
23/08/2022

ಉಡುಪಿ: ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪಗೆ ಮತ್ತೆ ಸಂಕಷ್ಟ ಆರಂಭವಾಗಿದ್ದು, ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದರೂ ಈಶ್ವರಪ್ಪ ಅವರಿಗೆ ಸಂಕಷ್ಟ ತಪ್ಪಿಲ್ಲ.

ಸಂತೋಷ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಉಡುಪಿ ಪೊಲೀಸರು  ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಆದರೆ ಸಂತೋಷ್ ಸಹೋದರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ‘ಬಿ’ ರಿಪೋರ್ಟ್ ಪ್ರಶ್ನಿಸಿ  ಅರ್ಜಿ ಸಲ್ಲಿಸಿದ್ದಾರೆ.

ಪೊಲೀಸರು ಪ್ರಭಾವಕ್ಕೆ ಒಳಗಾಗಿ ಸರಿಯಾದ ತನಿಖೆ ನಡೆಸಿಲ್ಲ. ಬೇರೆ ತನಿಖಾ ಸಂಸ್ಥೆಗೆ ಈ ಪ್ರಕರಣದ ತನಿಖೆಯನ್ನು ನೀಡಬೇಕು. ದೊಡ್ಡವರ ಪ್ರಭಾವಕ್ಕೆ ಒಳಗಾಗಿ ಪೊಲೀಸರು ತನಿಖೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಕೆ.ಎಸ್.ಈಶ್ವರಪ್ಪ ವಿರುದ್ಧ ಗುತ್ತಿಗೆದಾರ ಸಂತೋಷ್ 40% ಲಂಚದ ಆರೋಪ ಮಾಡಿದ್ದರು. ಇದಾದ ಬಳಿಕ ಉಡುಪಿಯ ಲಾಡ್ಜ್ ವೊಂದರಲ್ಲಿ ಸಂತೋಷ್ ಮೃತದೇಹ ಪತ್ತೆಯಾಗಿತ್ತು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version