8:27 AM Tuesday 18 - November 2025

ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಗೆ ಸುಪ್ರೀಂಕೋರ್ಟ್​ ತಾತ್ಕಾಲಿಕ ತಡೆ: ಮುಂದೇನಾಗಬಹುದು..?

24/07/2023

ವಾರಾಣಸಿಯ ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಗೆ ಸುಪ್ರೀಂಕೋರ್ಟ್​ ಇಂದು ತಾತ್ಕಾಲಿಕ ತಡೆ ನೀಡಿದೆ. ಜುಲೈ 26ರವರೆಗೆ ಸಮೀಕ್ಷೆ ನಡೆಸದಂತೆ ಭಾರತೀಯ ಪುರಾತತ್ವ ಇಲಾಖೆಗೆ ಸೂಚನೆ ನೀಡಲಾಗಿದೆ. ಅಲಹಾಬಾದ್ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಲು ಮಸೀದಿ ಕಮಿಟಿಗೆ ಸೂಚನೆ ನೀಡಲಾಗಿದೆ.

ಯಾವುದೇ ಉತ್ಖನನವಿಲ್ಲದೆ ಜ್ಞಾನವಾಪಿ ಮಸೀದಿಯ ಸಮೀಕ್ಷೆ ನಡೆಸಲು ಎಎಸ್​ಐಗೆ ಸುಪ್ರೀಂಕೋರ್ಟ್​ ಅನುಮತಿ ನೀಡಿತ್ತು. ಜಿಲ್ಲಾ ನ್ಯಾಯಾಲಯದ ಆದೇಶದ ವಿರುದ್ಧ ಹೈಕೋರ್ಟ್​ಗೆ ತೆರಳಲು ಮಸೀದಿ ಸಮಿತಿಗೆ ಜುಲೈ 26ರವರೆಗೆ ಕಾಲಾವಕಾಶ ನೀಡುವುದಾಗಿ ಸುಪ್ರೀಂಕೋರ್ಟ್​ ಹೇಳಿದೆ. ಅಲ್ಲಿಯವರೆಗೆ ಸ್ಥಳದಲ್ಲಿ ಯಥಾಸ್ಥಿತಿಯನ್ನು ಕಾಯ್ದುಕೊಳ್ಳುವಂತೆ ತಿಳಿಸಲಾಗಿದೆ.

ಸಮೀಕ್ಷೆಯು ಮಸೀದಿಯ ರಚನೆಯನ್ನು ಯಾವುದೇ ರೀತಿಯಲ್ಲಿ ಬದಲಾಯಿಸುವುದಿಲ್ಲ ಎಂದು ಕೇಂದ್ರ ಈಗಾಗಲೇ ಸುಪ್ರೀಂಕೋರ್ಟ್​ಗೆ ತಿಳಿಸಿದೆ.

ಭಾರತದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮಾತನಾಡಿ, ಪ್ರಸ್ತುತ ಅಳತೆ, ಛಾಯಾಗ್ರಹಣ ಮತ್ತು ರಾಡಾರ್ ಅಧ್ಯಯನಗಳನ್ನು ಮಾತ್ರ ನಡೆಸಲಾಗುತ್ತಿದೆ ಎಂದು ಹೇಳಿದರು.

ಭಾರತೀಯ ಪುರಾತತ್ವ ಇಲಾಖೆಯು ಕಾಶಿಯ ಜ್ಞಾನವಾಪಿ ಮಸೀದಿಯ ಸಮೀಕ್ಷೆಯನ್ನು ಇಂದು ಆರಂಭಿಸಿದೆ. ಅಯೋಧ್ಯೆಯ ರಾಮಜನ್ಮ ಭೂಮಿಯ ವ್ಯಾಜ್ಯವನ್ನು ನ್ಯಾಯಾಲಯದಲ್ಲಿ ಪರಿಹರಿಸಲಾಗಿದ್ದು, ಪ್ರಕರಣ ಅಂತ್ಯಗೊಂಡು ಇದೀಗ ರಾಮಮಂದಿರದ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಈಗ ವಾರಾಣಸಿಯ ದೇವಸ್ಥಾನವನ್ನು ಕೆಡವಿ ನಿರ್ಮಿಸಲಾಗಿದೆ ಎನ್ನಲಾಗಿರುವ ಜ್ಞಾನವಾಪಿ ಮಸೀದಿಯ ಸಮೀಕ್ಷೆಯನ್ನು ಇಂದು ಆರಂಭಿಸಲಾಗಿದೆ. ಈ ಕುರಿತು ಭಾರತೀಯ ಪುರಾತತ್ವ ಇಲಾಖೆ ಅಧಿಕೃತ ಮಾಹಿತಿ ನೀಡಿದೆ. 2022 ರಲ್ಲಿ ಸಮೀಕ್ಷೆಯ ಸಮಯದಲ್ಲಿ ಹಿಂದೂ ಪರ ದಾವೆದಾರರು, ಹಿಂದಿನ ಶಿವ ದೇವಾಲಯದ ಅವಶೇಷ ಎಂದು ಹೇಳಲಾಗತ್ತಿರುವ ಶಿವಲಿಂಗ ರೀತಿಯ ರಚನೆ ವಝುಖಾನಾ ಹೊರತುಪಡಿಸಿ ಎಲ್ಲಾ ಪ್ರದೇಶಗಳಿಗೆ ಈ ಸಮೀಕ್ಷೆ ವಿಸ್ತರಿಸುತ್ತದೆ. ಎಎಸ್ ಐ ಆಗಸ್ಟ್ 4ರೊಳಗೆ ಜಿಲ್ಲಾ ನ್ಯಾಯಾಲಯಕ್ಕೆ ವರದಿಯನ್ನು ಸಲ್ಲಿಸಬೇಕಿದೆ.

ಆರ್ಕಿಯಾಲಾಜಿಕಲ್ ಸರ್ವೆ ಆಫ್ ಇಂಡಿಯಾ ಸಮೀಕ್ಷೆ ನಡೆಸಿ ಅಂತಿಮ ವರದಿಯನ್ನು ಆಗಸ್ಟ್ 4 ರೊಳಗೆ ಸಲ್ಲಿಸುವಂತೆ ನ್ಯಾಯಾಲಯ ಹೇಳಿತ್ತು. ಅಲ್ಲದೇ ಬ್ಯಾರಿಕೇಡ್ ಹಾಕಿರುವ ‘ವಜೂಖಾನಾ’ ಹೊರತುಪಡಿಸಿ, ಹಿಂದೂ ದಾವೆಗಳು ‘ಶಿವಲಿಂಗ’ ಎಂದು ಹೇಳಿಕೊಳ್ಳುವ ರಚನೆಯು ಅಸ್ತಿತ್ವದಲ್ಲಿದೆ. ಇದು ಸಮೀಕ್ಷೆಯ ಭಾಗವಾಗಿರುವುದಿಲ್ಲ, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಈ ಆದೇಶವನ್ನು ಉನ್ನತ ನ್ಯಾಯಾಲಯಗಳಲ್ಲಿ ಪ್ರಶ್ನಿಸುವ ಸಾಧ್ಯತೆ ಇದೆ. ‘ವಜೂಖಾನಾ’ ಪ್ರದೇಶವನ್ನು ಸೀಲಿಂಗ್ ಮಾಡುವಂತೆ ಸುಪ್ರೀಂ ಕೋರ್ಟ್ ಈ ಹಿಂದೆ ಸೂಚಿಸಿತ್ತು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BnbLYSQaXK1Hate4P0Bt3B

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version