7:14 AM Saturday 17 - January 2026

ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿರುವಾಗ ತೆಲುಗು ಖ್ಯಾತ ನಟ ಜೂನಿಯರ್ ಎನ್ ಟಿಆರ್ ಗೆ ಗಾಯ!

junior ntr
07/11/2021

ಹೈದರಾಬಾದ್: ಖ್ಯಾತ ತೆಲುಗು ನಟ ಜೂನಿಯರ್ ಎನ್ ಟಿಆರ್ ಅವರು ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದ ಸಂದರ್ಭದಲ್ಲಿ ಗಾಯಗೊಂಡಿದ್ದು, ಅವರ ಕೈ ಬೆರಳಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.

ದೀಪಾವಳಿ ಸಂದರ್ಭದಲ್ಲಿ ಜೂನಿಯರ್ ಎನ್ ಟಿಆರ್ ತಮ್ಮ ಮಕ್ಕಳೊಂದಿಗಿನ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ವೇಳೆ ಅವರ ಕೈ ಬೆರಳಿಗೆ  ಬ್ಯಾಂಡೇಜ್ ಸುತ್ತಿಕೊಂಡಿರುವುದು ಕಂಡು ಬಂದಿದೆ. ಅಭಿಮಾನಿಗಳು ಇದೇನಾಗಿದ್ದು ಎಂದು ಪ್ರಶ್ನಿಸಿದಾಗ ಅವರು ಈ ವಿಚಾರ ತಿಳಿಸಿದ್ದಾರೆ.

ಜಿಮ್ ನಲ್ಲಿ ವರ್ಕೌಟ್ ಮಾಡುವಾಗ ಬೆರಳಿಗೆ ಗಾಯವಾಗಿದ್ದು, ಬೆರಳಿನ ಮೂಳೆ ಮುರಿದಿದ್ದರಿಂದ ಹೈದರಾಬಾದ್ ನಲ್ಲಿನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದರು. ಅದೇ ದಿನ ಅವರು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಪುನೀತ್ ರಾಜ್ ಕುಮಾರ್ ಅವರು ನಿಧನ ಹೊಂದಿದ ಸಂದರ್ಭದಲ್ಲಿ  ಜೂನಿಯರ್ ಎನ್ ಟಿಆರ್ ಅವರು ಅಂತಿಮ ದರ್ಶನ ಪಡೆದಿದ್ದರು. ಪುನೀತ್ ನಿಧನದಿಂದ ತೀವ್ರವಾಗಿ ನೊಂದಿದ್ದ ಅವರು, ಕಣ್ಣೀರು ಹಾಕಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version