ಹೆಚ್.ಡಿ. ರೇವಣ್ಣಗೆ ಷರತ್ತು ಬದ್ದ ಜಾಮೀನು ಮಂಜೂರು!

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪದಡಿಯಲ್ಲಿ ಜೈಲು ಸೇರಿರುವ ಮಾಜಿ ಸಚಿವ, ಹಾಲಿ ಶಾಸಕ ಹೆಚ್.ಡಿ. ರೇವಣ್ಣ ಅವರಿಗೆ ನ್ಯಾಯಾಲಯ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶ ಗಜಾನನ ಭಟ್ ಅವರು, ಸುದೀರ್ಘವಾದ ವಾದ – ಪ್ರತಿವಾದ ಆಲಿಸಿ ತೀರ್ಪು ಪ್ರಕಟಿಸಿದರು.
ರೇವಣ್ಣ ಪರ ವಕೀಲರಾದ ನಾಗೇಶ್ ಹಾಗೂ ಎಸ್‌ಐಟಿ ಪರ ವಕೀಲರಾದ (ಎಸ್‌ಪಿಪಿ) ಜಯ್ನಾ ಕೊಠಾರಿ ಹಾಗೂ ಅಶೋಕ್ ನಾಯ್ಕ್ ಸರ್ಕಾರದ ಪರವಾಗಿ ವಾದಿಸಿದರು.
ಇಬ್ಬರ ಶ್ಯೂರಿಟಿ, 5 ಲಕ್ಷ ರೂಪಾಯಿ ಬಾಂಡ್ ಹಾಗೂ ಸಾಕ್ಷ್ಯಾಧಾರ ನಾಶಪಡಿಸಬಾರದು, ಮಂಡ್ಯ ಜಿಲ್ಲೆಯ ಕೆ.ಆರ್.ನಗರ ತಾಲೂಕು ಪ್ರವೇಶಿಸುವಂತಿಲ್ಲ, ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂಬ ಷರತ್ತು ಬದ್ಧ ಜಾಮೀನು ಮಂಜೂರು ಮಾಡಲಾಗಿದೆ.
ಇನ್ನೂ ಈ ದಿನ ಜಾಮೀನು ಮಂಜೂರು ಮಾಡಲಾಗಿದೆ. ನಾಳೆ ಹೆಚ್.ಡಿ.ರೇವಣ್ಣ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth