ಹೆಚ್.ಡಿ.ಕುಮಾರಸ್ವಾಮಿ ಮಗನನ್ನು ಬಲಿಕೊಟ್ಟರು: ಸಿ.ಪಿ.ಯೋಗೇಶ್ವರ್
ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ.ಗೌಡರ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಪ್ರತಿಷ್ಠೆಗೆ ಅವರ ಮಗ ನಿಖಿಲ್ ಬಲಿಯಾಗಿದ್ದಾರೆ ಎಂದು ಚನ್ನಪಟ್ಟಣ ನೂತನ ಶಾಸಕ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ.
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಗೆಲುವು ದಾಖಲಿಸಿದ ನಂತರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕುಮಾರಸ್ವಾಮಿ ಮನಸ್ಸು ಮಾಡಿದ್ದರೆ ಮಗನನ್ನು ಮಂಡ್ಯ ಲೋಕಸಭೆ ಚುನಾವಣೆಗೆ ನಿಲ್ಲಿಸಿ ಗೆಲ್ಲಿಸಬಹುದಿತ್ತು. ಆದರೆ ಕೇಂದ್ರ ಸಚಿವರಾಗುವ ತವಕದಿಂದ ತಾವೇ ಅಲ್ಲಿ ಸ್ಪರ್ಧಿಸಿದರು. ಮಗನನ್ನು ಬಲಿಕೊಟ್ಟರು ಎಂದು ಯೋಗೇಶ್ವರ್ ಹೇಳಿದರು.
ದೇವೇಗೌಡರ ಕುಟುಂಬ ವರ್ಚಸ್ಸು ಕಳೆದುಕೊಳ್ಳುತ್ತಿದೆ. ಅವರದ್ದು ಕೇವಲ ಸ್ವಾರ್ಥದ ರಾಜಕಾರಣ. ಜನಪರ ಕಾಳಜಿ ಇದ್ದಿದ್ದರೆ ಜನ ಬೆಂಬಲಿಸುತ್ತಿದ್ದರು. ಆದರೆ ಅವರದ್ದು ಕೇವಲ ಸ್ವಾರ್ಥದ ರಾಜಕಾರಣ ಹಾಗಾಗಿ ಜನ ತಿರಸ್ಕರಿಸಿದ್ದಾರೆ ಎಂದು ಅವರು ಹೇಳಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97