ನಿರೀಕ್ಷಣಾ ಜಾಮೀನು ಅರ್ಜಿ ವಾಪಸ್ ಪಡೆದ ಹೆಚ್.ಡಿ.ರೇವಣ್ಣ

ಬೆಂಗಳೂರು: ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಹೆಚ್.ಡಿ.ರೇವಣ್ಣ, ತಾವು ನಿರೀಕ್ಷಣಾ ಜಾಮೀನಿಗೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಾಪಸ್ ಪಡೆದುಕೊಂಡಿದ್ದಾರೆ.
ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಇಂದು ವಿಚಾರಣೆ ನಡೆಯಿತು. ಈ ವೇಳೆ ಎಸ್ ಐಟಿ ಪರವಾಗಿ ಎಸ್ಪಿಪಿ ಜಗದೀಶ್ ವಾದ ಮಂಡಿಸಿ, ಸೆಕ್ಷನ್ 376 ಸೇರ್ಪಡೆ ಮಾಡಿಲ್ಲ. 376 ಅಲ್ಲದೆ ಬೇರೆ ಯಾವುದು ನಾನ್ ಬೇಲೆಬಲ್ ಸೆಕ್ಷನ್ ಹಾಕಲ್ಲ ಎಂದು ತಿಳಿಸಿದರು.
ಹೀಗಾಗಿ ರೇವಣ್ಣ ಪರ ವಕೀಲರು ನಿರೀಕ್ಷಣಾ ಜಾಮೀನು ಅರ್ಜಿ ವಾಪಸ್ ಪಡೆದರು.
ಮನೆಕೆಲಸದಾಕೆಗೆ ಹೆಚ್.ಡಿ.ರೇವಣ್ಣ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಆರೋಪಿಸಲಾಗಿದೆ. ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ರೇವಣ್ಣ ಅರ್ಜಿ ಸಲ್ಲಿಸಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth