ಎಚ್.ವಿಶ್ವನಾಥ್ ಸಚಿವರಾಗುವಂತಿಲ್ಲ | ಹೈಕೋರ್ಟ್ ಮಹತ್ವದ ಆದೇಶ
ಬೆಂಗಳೂರು: 2021ರವರೆಗೆ ಎಚ್.ವಿಶ್ವನಾಥ್ ಸಚಿವರಾಗುವಂತಿಲ್ಲ ಎಂದು ಹೈಕೋರ್ಟ್ ವಿಭಾಗೀಯ ಪೀಠ ಮಹತ್ವದ ಆದೇಶ ನೀಡಿದ್ದು, ವಿಶ್ವನಾಥ್ ಅನರ್ಹರಾಗಿ ಸೋತು ನಾಮ ನಿರ್ದೇಶನಗೊಂಡಿದ್ದಾರೆ. ಹೀಗಾಗಿ ಅವರು 2021ರವರೆಗೆ ಸಚಿವರಾಗುವಂತಿಲ್ಲ ಎಂದು ಕೋರ್ಟ್ ಹೇಳಿದೆ.
ಹೆಚ್ ವಿಶ್ವನಾಥ್, ಆರ್ ಶಂಕರ್ ಮತ್ತು ಎಂಟಿಬಿ ನಾಗರಾಜ್ ಅವರಿಗೆ ಸಚಿವ ಸ್ಥಾನ ನೀಡುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಕೋರ್ಟ್ ವಿಭಾಗಿಯ ಪೀಠವು, ಹೆಚ್ ವಿಶ್ವನಾಥ್ ಸಚಿವರಾಗಲು ಅನರ್ಹರಾಗಿದ್ದಾರೆ. ಅನರ್ಹರಾಗಿ, ಸೋತು ನಾಮನಿರ್ದೇಶನಗೊಂಡಿದ್ದಾರೆ. ವಿಶ್ವನಾಥ್ ಅನರ್ಹತೆಯನ್ನು ಸಿಎಂ ಪರಿಗಣಿಸಬೇಕು. ಕಲಂ 164(1ಬಿ), 361 ಬಿ ಅಡಿ ವಿಶ್ವನಾಥ್ ಅನರ್ಹರು ಎಂದು ಹೇಳಿದೆ.
ಆರ್.ಶಂಕರ್, ಎಂ.ಟಿ.ಬಿ ನಾಗರಾಜ್ ಅವರು ಚುನಾವಣೆಯಲ್ಲಿ ಆಯ್ಕೆಗೊಂಡು ಎಂ.ಎಲ್ ಸಿ ಆಗಿದ್ದಾರೆ. ಹೀಗಾಗಿ ಅವರಿಗೆ ಸಚಿವರಾಗಲು ಯಾವುದೇ ಅಡೆತಡೆಯಿಲ್ಲ. ಅವರು ಸಚಿವ ಸ್ಥಾನ ಪಡೆಯಲು ಅರ್ಹರಾಗಿದ್ದಾರೆ ಎಂದು ಕೋರ್ಟ್ ಹೇಳಿದೆ.
Disclaimer:
www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.