ವಾರಣಾಸಿಯಲ್ಲಿ ಪ್ರಿಯಾಂಕ ಗಾಂಧಿ ಸ್ಪರ್ಧಿಸಿದ್ದರೆ ಮೋದಿ ವಿರುದ್ಧ ಗೆಲುವು ಸಾಧಿಸುತ್ತಿದ್ದರು: ರಾಹುಲ್ ಗಾಂಧಿ

rahul gandhi
12/06/2024

ಪ್ರಧಾನಿ ನರೇಂದ್ರ ಮೋದಿ ಸ್ಪರ್ಧಿಸಿದ್ದ ವಾರಣಾಸಿಯಲ್ಲಿ ಪ್ರಿಯಾಂಕ ಗಾಂಧಿ ಸ್ಪರ್ಧಿಸಿದ್ದರೆ, ಅವರು ಗೆಲುವು ಸಾಧಿಸುತ್ತಿದ್ದರು ಎಂದು ರಾಯ್‌ ಬರೇಲಿ ಮತ್ತು ವಯನಾಡ್ ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೆ ನೀಡಿದ್ದಾರೆ.

ರಾಯ್‌ ಬರೇಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಸಹೋದರಿ ಪ್ರಿಯಾಂಕ ಗಾಂಧಿ ವಾದ್ರಾ, ನರೇಂದ್ರ ಮೋದಿಯವರ ವಿರುದ್ದ ವಾರಣಾಸಿಯಲ್ಲಿ ಸ್ಪರ್ಧಿಸಿದ್ದರೆ ಗೆಲುವು ಸಾಧಿಸುತ್ತಿದ್ದರು. ಕನಿಷ್ಠ ಎರಡು ಲಕ್ಷ ಮತಗಳ ಅಂತರದಿಂದ ಪ್ರಿಯಾಂಕ ಗೆಲುವು ಕಾಣುತ್ತಿದ್ದರು ಎಂದು ಅವರು ಹೇಳಿದ್ದಾರೆ.

ಈ ಮಾತು ದುರಂಹಕಾರದಲ್ಲ, ವಾಸ್ತವತೆ. ಈ ಬಾರಿಯ ಚುನಾವಣೆಯಲ್ಲಿ ಭಾರತದ ಜನತೆ, ಬಿಜೆಪಿ ಮತ್ತು ನರೇಂದ್ರ ಮೋದಿಯವರಿಗೆ ಸ್ಪಷ್ಟ ಸಂದೇಶವನ್ನು ರವಾನಿಸಿದ್ದಾರೆ. ಪ್ರಧಾನಿ ಮೋದಿಗೆ ಭಾರೀ ಜನಪ್ರಿಯತೆ ಇದ್ದಿದ್ದೇ ಆದಲ್ಲಿ, ಅವರ ಗೆಲುವಿನ ಅಂತರ ಯಾಕೆ ಕಮ್ಮಿಯಾಗುತ್ತಿತ್ತು ಎಂದು ರಾಹುಲ್ ಪ್ರಶ್ನಿಸಿದ್ದಾರೆ.

ದ್ವೇಷ ರಾಜಕಾರಣದ ವಿರುದ್ದ ಜನಾದೇಶ ಬಂದಿದೆ ಎನ್ನುವುದನ್ನು ಬಿಜೆಪಿಯವರು ನೆನಪಿಟ್ಟುಕೊಳ್ಳಬೇಕು. ಪ್ರಿಯಾಂಕ ಸ್ಪರ್ಧಿಸುತ್ತಿದ್ದರೆ ಗೆಲುವು ಕಾಣುತ್ತಿತ್ತು, ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷಕ್ಕೆ ಮತದಾರ ಬೆಂಬಲವನ್ನು ನೀಡಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ

Exit mobile version