ಹದಗೆಟ್ಟ ಕೊಟ್ಟಿಗೆಹಾರ ಗಂಗಾಮುಲ ರಸ್ತೆ: ಗ್ರಾಮಸ್ಥರಿಂದ ಪ್ರತಿಭಟನೆಗೆ ನಿರ್ಧಾರ
03/09/2024
ಕೊಟ್ಟಿಗೆಹಾರ: ಕೊಟ್ಟಿಗೆಹಾರದಿಂದ ಕುದುರೆಮುಖ ಗಂಗಾಮೂಲ ರಸ್ತೆಯು ಸಂಪೂರ್ಣ ಹದಗೆಟ್ಟಿದ್ದು, ನಿಡುವಾಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಸವಾರರು ಮತ್ತು ಸಾರ್ವಜನಿಕರಿಗೆ ಸಂಚರಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ.
ನಿಡುವಳೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ನವೀನ್ ಹಾವಳಿ ಮಾತನಾಡಿ, ಈ ಬಗ್ಗೆ ಲೋಕೋಪಯೋಗಿ ಅಧಿಕಾರಿಗಳ ಗಮನಕ್ಕೂ ತಂದರು ನಿರ್ಲಕ್ಷ ತೋರಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಾತ್ಕಾಲಿಕವಾಗಿ ರಸ್ತೆಯನ್ನು ತಕ್ಷಣವೇ ಸರಿಪಡಿಸದಿದ್ದರೆ ಮುಂದಿನ ಹೆಜ್ಜೆಯಾಗಿ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಅಧಿಕಾರಿಗಳಿಗೆ ಅವರು ಎಚ್ಚರಿಕೆ ನೀಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: