10:59 AM Saturday 31 - January 2026

ತುರ್ತು ಭೂಸ್ಪರ್ಶ ಮಾಡಿದ ವಿಸ್ತಾರ ವಿಮಾನ: ಆಲಿಕಲ್ಲು ಮಳೆಯಿಂದ ಫ್ಲೈಟ್ ಗೆ ಹಾನಿ

02/05/2024

ಭುವನೇಶ್ವರದಿಂದ ನವದೆಹಲಿಗೆ ತೆರಳುತ್ತಿದ್ದ ವಿಸ್ತಾರ ವಿಮಾನವು ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ವಾಪಸ್ಸಾದ ಘಟನೆ ‌ನಡೆದಿದೆ. ಈ ಮಧ್ಯೆ ಈ ವಿಮಾನವು ಆಲಿಕಲ್ಲು ಮಳೆಯಲ್ಲಿ ಸಿಲುಕಿ ಹಾನಿಗೊಳಗಾದ ನಂತರ ತುರ್ತು ಭೂಸ್ಪರ್ಶ ಮಾಡಿತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ವಿಮಾನದಲ್ಲಿದ್ದ 169 ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ.
ನವದೆಹಲಿಗೆ ತೆರಳುತ್ತಿದ್ದ ವಿಸ್ತಾರ ವಿಮಾನವು ಟೇಕ್ ಆಫ್ ಆದ ಕೇವಲ 10 ನಿಮಿಷಗಳ ನಂತರ ಇಲ್ಲಿನ ಬಿಜು ಪಟ್ನಾಯಕ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಬಿಪಿಐಎ) ಇಳಿಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ ಇಂದು ಮಧ್ಯಾಹ್ನ ಒಡಿಶಾದ ಹಲವಾರು ಭಾಗಗಳಲ್ಲಿ ಸುರಿದ ಆಲಿಕಲ್ಲು ಮಳೆಯಿಂದಾಗಿ ವಿಮಾನದ ವಿಂಡ್ಶೀಲ್ಡ್ ನಲ್ಲಿ ಬಿರುಕು ಕಾಣಿಸಿಕೊಂಡಿದೆ.

ವಿಂಡ್ಶೀಲ್ಡ್ಗೆ ಹಾನಿಯಾಗಿದ್ದು, ಪ್ರಯಾಣಿಕರಿಗೆ ಯಾವುದೇ ಹಾನಿಯಾಗಿಲ್ಲ ಎಂದು ಬಿಪಿಐಎ ನಿರ್ದೇಶಕ ಪ್ರಸನ್ನ ಪ್ರಧಾನ್ ತಿಳಿಸಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version