ಬ್ರೇಕಿಂಗ್ ನ್ಯೂಸ್: ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಸಿ.ಎಂ. ಉದಾಸಿ ನಿಧನ
08/06/2021
ಬೆಂಗಳೂರು: ರಕ್ತ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಸಿ.ಎಂ. ಉದಾಸಿ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.
15 ದಿನದ ಹಿಂದೆ ಬೆಂಗಳೂರಿನ ಹೊಸೂರು ರಸ್ತೆಯಲ್ಲಿರುವ ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಗೆ 81 ವರ್ಷ ವಯಸ್ಸಿನ ಉದಾಸಿ ಅವರು ರಕ್ತ ಸಂಬಂಧಿತ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮಧ್ಯಾಹ್ನ ನಿಧನರಾಗಿದ್ದಾರೆ.
1983ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಹಾನಗಲ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅವರು ಗೆಲುವು ಸಾಧಿಸಿದ್ದರು. ಈ ಹಿಂದೆ ಯಡಿಯೂರಪ್ಪನವರ ಸರ್ಕಾರದಲ್ಲಿ 6 ಬಾರಿ ಹಾನಗಲ್ ಕ್ಷೇತ್ರದಿಂದ ಸ್ಪರ್ಧಿಸಿ ಅವರು ಗೆಲುವು ಪಡೆದಿದ್ದರು.

Provided by

Provided by

Provided by

Provided by

Provided by

Provided by

Provided by

Provided by

Provided by

Provided by

Provided by




























