ಕೊಟ್ಟಿಗೆಹಾರ: ವಾಹನಗಳ ಅಡ್ಡಾದಿಡ್ಡಿ ಪಾರ್ಕಿಂಗ್ ಪ್ರಯಾಣಿಕರಿಗೆ ತೊಂದರೆ

ಕೊಟ್ಟಿಗೆಹಾರ : ಕೊಟ್ಟಿಗೆಹಾರ ಪ್ರವಾಸಿ ತಾಣವಾಗಿದ್ದು, ಇಲ್ಲಿಗೆ ಪ್ರವಾಸಿಗರು ಅಡ್ಡಾದಿಡ್ಡಿ ವಾಹನಗಳನ್ನು ಪಾರ್ಕಿಂಗ್ ಮಾಡಿ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ ಎಂದು ಸಾರ್ವಜನಿಕರು ದೂರಿದ್ದಾರೆ.
ಕೊಟ್ಟಿಗೆಹಾರವು ಹೊರನಾಡು, ಧರ್ಮಸ್ಥಳ, ಶೃಂಗೇರಿಗೆ ಸಂಪರ್ಕ ಕಲ್ಪಿಸುವ ರಸ್ತೆಯಾಗಿದ್ದು ವಾರಾಂತ್ಯದಲ್ಲಿ ಈ ಪ್ರದೇಶ ಜನರಿಂದ ತುಂಬಿ ತುಳುಕುತ್ತಿರುತ್ತದೆ. ಆದರೆ ಇಲ್ಲಿಗೆ ಬರುವ ಪ್ರವಾಸಿಗರು ನಗರದಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡುವಂತೆ ಈ ಭಾಗದಲ್ಲೂ ಪಾರ್ಕಿಂಗ್ ಮಾಡಿ ಸಾಗುತ್ತಾರೆ. ಆದರೆ ಇತರೆ ವಾಹನಗಳಿಗೆ ಇದರಿಂದ ತೊಂದರೆಯಾಗುತ್ತಿದೆ.
ಪೊಲೀಸರು ಕೂಡ ಅಡ್ಡಾದಿಡ್ಡಿ ವಾಹನ ನಿಲ್ಲಿಸುವವರಿಗೆ ದಂಡದ ಬಿಸಿ ಮುಟ್ಟಿಸಬೇಕಿದೆ.ಇಲ್ಲಿ ಪ್ರತಿನಿತ್ಯವೂ ಟ್ರಾಫಿಕ್ ಜಾಮ್ ಸಮಸ್ಯೆಯನ್ನು ಬಗೆಹರಿಸಲು ವಾಹನಗಳ ಪಾರ್ಕಿಂಗ್ ಬಗ್ಗೆ ಪ್ರವಾಸಿಗರು ಹೆಚ್ಚು ಗಮನ ಹರಿಸಬೇಕಿದೆ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97