'ಅತ್ಯಂತ ಸಂತೋಷದ ಕ್ಷಣ': ತಮಿಳುನಾಡಿನಲ್ಲಿ ಬಿಜೆಪಿ ಜೊತೆಗಿನ ಸಂಬಂಧವನ್ನು ಕೊನೆಗೊಳಿಸಿದ ಎಐಎಡಿಎಂಕೆಯಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ - Mahanayaka
1:09 AM Wednesday 15 - October 2025

‘ಅತ್ಯಂತ ಸಂತೋಷದ ಕ್ಷಣ’: ತಮಿಳುನಾಡಿನಲ್ಲಿ ಬಿಜೆಪಿ ಜೊತೆಗಿನ ಸಂಬಂಧವನ್ನು ಕೊನೆಗೊಳಿಸಿದ ಎಐಎಡಿಎಂಕೆಯಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

25/09/2023

ತಮಿಳುನಾಡಿನಲ್ಲಿ ಬಿಜೆಪಿಯೊಂದಿಗೆ ಸಂಬಂಧವನ್ನು ಕಡಿದುಕೊಳ್ಳುವ ಮತ್ತು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವನ್ನು ತೊರೆಯುವ ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (ಎಐಎಡಿಎಂಕೆ) ನಿರ್ಧಾರವನ್ನು ಉಲ್ಲೇಖಿಸಿದ ಎಐಎಡಿಎಂಕೆ ವಕ್ತಾರೆ ಶಶಿರೇಖಾ, ಇದು ನಮ್ಮ ಪಕ್ಷಕ್ಕೆ “ಸಂತೋಷದ ಕ್ಷಣ” ಎಂದು ಹೇಳಿದ್ದಾರೆ.


Provided by

ಪಕ್ಷದ ಸದಸ್ಯರ ಅಭಿಪ್ರಾಯದ ಆಧಾರದ ಮೇಲೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದರು.
ಪಕ್ಷದ ಸದಸ್ಯರ ಅಭಿಪ್ರಾಯದ ಆಧಾರದ ಮೇಲೆ ನಾವು ಈ ನಿರ್ಣಯವನ್ನು ತೆಗೆದುಕೊಳ್ಳುತ್ತಿದ್ದೇವೆ. ಎಐಎಡಿಎಂಕೆಗೆ ಇದು ಅತ್ಯಂತ ಸಂತೋಷದ ಕ್ಷಣ. ಮುಂಬರುವ ಚುನಾವಣೆಗಳನ್ನು ಎದುರಿಸಲು ನಮಗೆ ತುಂಬಾ ಸಂತೋಷವಾಗಿದೆ. ಅದು ಸಂಸತ್ತು ಅಥವಾ ವಿಧಾನಸಭಾ ಚುನಾವಣೆಯಾಗಿರಬಹುದು ಎಂದು ಶಶಿರೇಖಾ ಹೇಳಿದರು.

ಎಐಎಡಿಎಂಕೆ ಕಾರ್ಯಕರ್ತರು ಚೆನ್ನೈನಲ್ಲಿ ಪಟಾಕಿ ಸಿಡಿಸುವ ಮೂಲಕ ಪಕ್ಷದ ನಿರ್ಧಾರವನ್ನು ಸಂಭ್ರಮಿಸಿದರು. ತಮಿಳುನಾಡಿನ ಪ್ರಮುಖ ವಿರೋಧ ಪಕ್ಷವಾದ ಎಐಎಡಿಎಂಕೆ ಚೆನ್ನೈನ ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದ ಸಭೆಯ ನಂತರ ಬಿಜೆಪಿಯೊಂದಿಗೆ ಸಂಬಂಧವನ್ನು ಕಡಿದುಕೊಳ್ಳುವ ನಿರ್ಧಾರವನ್ನು ಪ್ರಕಟಿಸಿತ್ತು. ಎಐಎಡಿಎಂಕೆ ಉಪ ಸಂಯೋಜಕ ಕೆ.ಪಿ.ಮುನುಸಾಮಿ ಮಾತನಾಡಿ, “ಎನ್ಡಿಎ ತೊರೆಯುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು” ಎಂದಿದ್ದಾರೆ.

ಇತ್ತೀಚಿನ ಸುದ್ದಿ