ಪಾಲಿಕೆ ಅಧಿಕಾರಿಗಳಿಂದ ಕಿರುಕುಳ: ಬೀದಿಬದಿ ವ್ಯಾಪಾರಿ ಮಹಿಳೆ ಆತ್ಮಹತ್ಯೆಗೆ ಯತ್ನ

ಮಂಗಳೂರು: ಬೀದಿ ವ್ಯಾಪಾರದ ಜಾಗದಲ್ಲಿ ಅನಧಿಕೃತ ಆಟೋ ರಿಕ್ಷಾ ಪಾರ್ಕ್ ನಿರ್ಮಾಣ ಮಾಡಿ ಮಹಿಳಾ ಬೀದಿಬದಿ ವ್ಯಾಪಾರಿಗೆ ಆಟೋ ರಿಕ್ಷಾ ಚಾಲಕರ ಸಂಘ ಮತ್ತು ಪಾಲಿಕೆ ಅಧಿಕಾರಿಗಳು ಕಿರುಕುಳ ನೀಡಿದ್ದರಿಂದ ನೊಂದು ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಶಾಲಿನಿ (48) ಆತ್ಮಹತ್ಯೆಗೆ ಯತ್ನಿಸಿದವರು ಎಂದು ಹೇಳಲಾಗಿದೆ. ವ್ಯಾಪಾರದಲ್ಲಿ ಅಪಾರ ನಷ್ಟ ಮತ್ತು ಕಿರುಕುಳ ತಾಳಲಾರದೇ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದು ಬಂದಿದೆ.
ಸದ್ಯ ಮಹಿಳೆಯ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ಮಂಗಳೂರಿನ ಎ.ಜೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ನಗರದ ಬೋಂದೆಲ್ ಜಂಕ್ಷನ್ ಬಳಿ ಏರ್ ಪೋರ್ಟ್ ರಸ್ತೆಯಲ್ಲಿ ಪಾಲಿಕೆಯ ಅನುಮತಿ ಇಲ್ಲದೆ ವಿಧಾನ ಪರಿಷತ್ ಸದಸ್ಯರ ಅನುದಾನದಿಂದ ಅನಧಿಕೃತ ರಿಕ್ಷಾ ಪಾರ್ಕ್ ನಿರ್ಮಾಣಗೊಂಡ ನಂತರ ಈ ಬೆಳವಣಿಗೆ ನಡೆಯುತ್ತಿದೆ ಎಂದು ಡಿವೈಎಫ್ ಐ ಮುಖಂಡರು ಮಾಹಿತಿ ನೀಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD