ಕಾರಿನಲ್ಲಿ ತೆರಳುತ್ತಿದ್ದ ಯುವತಿಯರನ್ನು ಫಾಲೋ ಮಾಡಿ ಕಿರುಕುಳ: ಮೂವರು ಪೊಲೀಸ್ ವಶಕ್ಕೆ - Mahanayaka

ಕಾರಿನಲ್ಲಿ ತೆರಳುತ್ತಿದ್ದ ಯುವತಿಯರನ್ನು ಫಾಲೋ ಮಾಡಿ ಕಿರುಕುಳ: ಮೂವರು ಪೊಲೀಸ್ ವಶಕ್ಕೆ

bangalore
01/04/2024

ಬೆಂಗಳೂರು:  ಕಾರಿನಲ್ಲಿ ತೆರಳುತ್ತಿದ್ದ ಇಬ್ಬರು ಮಹಿಳೆಯರನ್ನು ಫಾಲೋ ಮಾಡಿ ಕಿರುಕುಳ ನೀಡಿದ ಘಟನೆ ಬೆಂಗಳೂರಿನಲ್ಲಿ ಮತ್ತೆ ನಡೆದಿದ್ದು, ಕೋರಮಂಗಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇದೀಗ ನಡೆದ ಕೃತ್ಯಕ್ಕೆ ಸಂಬಂಧಿಸಿದಂತೆ ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ತೇಜಸ್, ಜಗನ್ನಾಥ್, ಕಣ್ಣನ್  ಎಂಬ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇವರ ಜೊತೆಗಿದ್ದ ಇತರ ಆರೋಪಿಗಳು ಪರಾರಿಯಾಗಿದ್ದು, ಅವರನ್ನು ವಶಕ್ಕೆ ಪಡೆಯಲು ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಪ್ರತಿಷ್ಠಿತ ಕಂಪೆನಿಯಲ್ಲಿ ಕೆಲಸ ಮಾಡುತ್ತಿರುವ ಇಬ್ಬರು ಮಹಿಳೆಯರು ರಾತ್ರಿ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಒಂದು ಬದಿಗೆ ಇಂಡಿಕೇಟರ್ ಹಾಕಿ ಇನ್ನೊಂದು ಬದಿಗೆ ಕಾರು ಚಲಾಯಿಸಿದ ವಿಚಾರದಲ್ಲಿ ಯುವಕರ ಜೊತೆಗೆ ಕಿರಿಕ್ ನಡೆದಿದೆ.

ಈ ವೇಳೆ ಮಾತಿಗೆ ಮಾತು ಬೆಳೆದಿದ್ದು, ಕೋಪಗೊಂಡ ಯುವಕರು ಕಾರಿನ ಡೋರ್ ಓಪನ್ ಮಾಡಲು ಮುಂದಾಗಿದ್ದಾರೆ ಎಂದು ಆರೋಪಿಸಲಾಗಿದೆ.  ಈ ವೇಳೆ ಯುವತಿಯರು ಕಾರು ಸ್ಪೀಡ್ ಆಗಿ ಚಲಾಯಿಸಿಕೊಂಡು ಹೋಗಿದ್ದು, ಯುವತಿಯರನ್ನು  ಆರೋಪಿಗಳು ಚೇಸ್ ಮಾಡಿಕೊಂಡು ಹೋಗಿದ್ದಾರೆ.  ಈ ವೇಳೆ 112ಗೆ ಫೋನ್ ಮಾಡಿ ಯುವತಿಯರು ಪೊಲೀಸರ ಸಹಾಯ ಕೇಳಿದ್ದಾರೆ.

ಇನ್ನೂ ಪೊಲೀಸರು ಸ್ಥಳಕ್ಕೆ ಆಗಮಿಸುತ್ತಿದ್ದಂತೆಯೇ ದ್ವಿಚಕ್ರ ವಾಹನದಲ್ಲಿ ಫಾಲೋ ಮಾಡುತ್ತಿದ್ದ ಪುಂಡರ ಪೈಕಿ ಕೆಲವರು ಎಸ್ಕೇಪ್ ಆಗಿದ್ದಾರೆ. ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ