ಮೈಕ್ರೋ ಫೈನಾನ್ಸ್, ಸ್ವಸಹಾಯ ಸಂಘದ ಕಿರುಕುಳ: ವಿಕಲಚೇತನ ಮಗಳೊಂದಿಗೆ ರೈಲಿಗೆ ತಲೆಕೊಟ್ಟು ತಾಯಿ ಆತ್ಮಹತ್ಯೆ

ದಾವಣಗೆರೆ: ಮೈಕ್ರೋ ಫೈನಾನ್ಸ್ ಹಾಗೂ ಸ್ವಸಹಾಯ ಸಂಘಗಳ ಕಿರುಕುಳದಿಂದ ಬೇಸತ್ತು ತಾಯಿ ಹಾಗೂ ವಿಕಲಚೇತನ ಮಗಳು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ನಗರದ ಬಳಿ ಇರುವ ತುಂಗಭದ್ರ ನದಿ ಸೇತುವೆ ಬಳಿ ನಡೆದಿದೆ.
ಗಂಗನರಸಿ ಗ್ರಾಮದ ಸುವರ್ಣಮ್ಮ (56), ವಿಕಲಚೇತನ ಮಗಳು ಗೌರಮ್ಮ (26) ಆತ್ಮಹತ್ಯೆಗೆ ಶರಣಾದವರು ಎಂದು ಗುರುತಿಸಲಾಗಿದೆ.
ಸುವರ್ಣಮ್ಮ, ಕೆಲ ವರ್ಷಗಳ ಹಿಂದೆ ಪತಿಯನ್ನು ಕಳೆದುಕೊಂಡಿದ್ದರು. ಮೂವರು ಪುತ್ರಿಯರಲ್ಲಿ ಇಬ್ಬರ ವಿವಾಹವಾಗಿದ್ದು, ಅಂಗವಿಕಲೆಯಾದ ಗೌರಮ್ಮ ತಾಯಿಯೊಂದಿಗೆ ನೆಲೆಸಿದ್ದರು.
ಕೂಲಿ ಕೆಲಸ ಮಾಡಿಕೊಂಡು ಸಂಸಾರ ಸಾಗಿಸುತ್ತಿದ್ದ ಸುವರ್ಣಮ್ಮ, ಮೈಕ್ರೊ ಫೈನಾನ್ಸ್ ಮತ್ತು ಸ್ವಸಹಾಯ ಸಂಘಗಳಲ್ಲಿ 3 ಲಕ್ಷಕ್ಕೂ ಅಧಿಕ ಸಾಲ ಪಡೆದಿದ್ದರು. 2 ಸಾಲಕ್ಕೆ ವಾರಕ್ಕೊಮ್ಮೆ ಹಾಗೂ 1 ಸಾಲಕ್ಕೆ ತಿಂಗಳ ಕಂತುಗಳಲ್ಲಿ ಮರುಪಾವತಿ ಮಾಡಬೇಕಿತ್ತು. ಸಾಲದ ಕಂತು ಸರಿಯಾಗಿ ಪಾವತಿಸಲು ಕಷ್ಟಪಡುತ್ತಿದ್ದರು.
ಸಾಲಗಾರರ ಕಾಟ ತಾಳಲಾರದೆ ತುಂಗಾಭದ್ರಾ ನದಿಗೆ ನಿರ್ಮಿಸಿದ ರೈಲ್ವೆ ಸೇತುವೆಯ ಮೇಲೆ ತೆರಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಸಂಬಂಧ ದಾವಣಗೆರೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮೃತರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD