ವಿದ್ಯಾರ್ಥಿನಿಯರಿಗೆ ಖಾಸಗಿ ಅಂಗದ ಫೋಟೋ ಕಳುಹಿಸಿ ಕಿರುಕುಳ: ಪ್ರೊಬೇಷನರಿ ಪಿಎಸ್ ಐ ವಿರುದ್ಧ ದೂರು

ಚಾಮರಾಜನಗರ: ಪ್ರೊಬೇಷನರಿ ಪಿಎಸ್ ಐವೋರ್ವ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದ್ದು, ಫೇಸ್ ಬುಕ್ ನಲ್ಲಿ ಪರಿಚಿಯಿಸಿಕೊಂಡು ಮೊಬೈಲ್ ನಂಬರ್ ಪಡೆದು ವಿದ್ಯಾರ್ಥಿನಿಯರಿಗೆ ತನ್ನ ಖಾಸಗಿ ಅಂಗದ ಫೋಟೋ ಕಳುಹಿಸಿ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ.
ಪಿಎಸ್ ಐ ಜಗದೀಶ್ ಎಂಬಾತನ ವಿರುದ್ಧ ಈ ಗಂಭೀರ ಆರೋಪ ಕೇಳಿ ಬಂದಿದೆ. ಈತನ ವಿರುದ್ಧ ದೂರು ದಾಖಲಾಗಿದ್ದು, ಚಾಮರಾಜನಗರ ಎಸ್ ಪಿ ಕಚೇರಿಗೆ ತನಿಖೆ ನಡೆಸುವಂತೆ ಐಜಿ ಕಚೇರಿಯಿಂದ ತಾಕೀತು ಬಂದಿದೆ ಎಂದು ವರದಿಯಾಗಿದೆ.
ಸದ್ಯ ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು ಅವರು ತನಿಖೆಯ ಹೊಣೆಯನ್ನು ಚಾಮರಾಜನಗರ ಡಿವೈಎಸ್ ಪಿ ವಹಿಸಿದ್ದಾರೆ ಎಂದು ತಿಳಿದು ಬಂದಿದೆ.
ಫೇಸ್ ಬುಕ್ ಮೂಲಕ ಪಿಎಸ್ ಐ ಜಗದೀಶ್ ಮೈಸೂರು ಮೂಲದ ವಿದ್ಯಾರ್ಥಿನಿಯರನ್ನು ಟಾರ್ಗೆಟ್ ಮಾಡುತ್ತಿದ್ದ. ಮೊದಲಿಗೆ ಫ್ರೆಂಡ್ ರಿಕ್ವೆಸ್ಟ್ ಕಳುಹಿಸುತ್ತಿದ್ದ, ಫ್ರೆಂಡ್ ರಿಕ್ವೆಸ್ಟ್ ಅಕ್ಸೆಪ್ಟ್ ಮಾಡಿದ ವಿದ್ಯಾರ್ಥಿನಿಯರ ಬಳಿ ಮೊಬೈಲ್ ನಂಬರ್ ಕೇಳಿ ಪಡೆಯುತ್ತಿದ್ದ. ಬಳಿಕ ಲವ್ ಮಾಡು, ಔಟಿಂಗ್ ಹೋಗೋಣ ಎಂದೆಲ್ಲ ವಿದ್ಯಾರ್ಥಿನಿಯರಿಗೆ ಸಂದೇಶ ಕಳುಹಿಸುತ್ತಿದ್ದು, ಆಚೆ ಬಾರದೇ ಇದ್ದರೆ, ಸರಿ ಇರುವುದಿಲ್ಲ ಎಂದು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ, ಹಣ ಕೂಡ ವಸೂಲಿ ಮಾಡಿದ್ದ ಎಂದು ಆರೋಪಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಇದೀಗ ಸಂಘಟನೆಯೊಂದು ನೊಂದ ವಿದ್ಯಾರ್ಥಿನಿಯರ ಪರ ದೂರು ನೀಡಿದ್ದು, ಕ್ರಮಕ್ಕೆ ಆಗ್ರಹಿಸಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth