11:35 PM Thursday 28 - August 2025

ಯುವ ಪತ್ರಕರ್ತೆ ಹರ್ಷಿಣಿ ಬ್ರಹ್ಮಾವರ ಅವರಿಗೆ ಬೀಳ್ಕೊಡುಗೆ

udupi
01/10/2022

ಕಳೆದ  ಎಂಟು ವರ್ಷಗಳ ಕಾಲ ಉಡುಪಿಯಲ್ಲಿ ಡೈಜಿ ವರ್ಲ್ಡ್ ಸಂಸ್ಥೆಯ ವರದಿಗಾರ್ತಿಯಾಗಿ ಕೆಲಸ ಮಾಡಿಕೊಂಡಿದ್ದ ಹರ್ಷಿಣಿ ಬ್ರಹ್ಮಾವರ ಅವರಿಗೆ ಬೀಳ್ಕೊಡುಗೆ ಸಮಾರಂಭ ಉಡುಪಿಯ ಬ್ರಹ್ಮಗಿರಿ ಪತ್ರಿಕಾ ಭವನದಲ್ಲಿ ಶನಿವಾರ ಆಯೋಜಿಸಲಾಗಿತ್ತು.

ಉಡುಪಿ  ಜಿಲ್ಲಾ ಕಾರ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ಅಧ್ಯಕ್ಷತೆಯಲ್ಲಿ ಹಿರಿಯ ಪತ್ರಕರ್ತ ಬಿ.ಬಿ. ಶೆಟ್ಟಿಗಾರ್  ಹರ್ಷಿಣಿ ಬ್ರಹ್ಮಾವರ ಅವರರನ್ನು ಸನ್ಮಾನಿಸಿ ಶುಭ ಹಾರೈಸಿದರು.

ಪದವಿಯ ನಂತರ ಉಡುಪಿಯ ಜಿ.ಶಂಕರ್ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿದ್ದ ಹರ್ಷಿಣಿ ಬ್ರಹ್ಮಾವರ, ಮಾಧ್ಯಮ ಕ್ಷೇತ್ರದ ಮೇಲಿನ ಅತೀವ ಆಸಕ್ತಿಯಿಂದ ವರದಿಗಾರ್ತಿಯಾದರು. ಎಂಟು ವರ್ಷಗಳ ಕಾಲ ಡೈಜಿ ವರ್ಲ್ಡ್ ವಾರ್ತಾ ವಾಹಿನಿಯಲ್ಲಿ ಸೇವೆಸಲ್ಲಿಸುತ್ತಿದ್ದರು.  ಮುಂದೆ ಇವರು ಬೆಂಗ್ಳೂರಿನಲ್ಲಿ ರೈಟ್ ಮ್ಯಾನ್ ಮೀಡಿಯಾ ಸಂಸ್ಥೆಯ ಪಬ್ಲಿಕ್ ಟಿವಿಯ ಡಿಜಿಟಲ್ ವಿಭಾಗದಲ್ಲಿ ತಮ್ಮ ವೃತ್ತಿ ಜೀವನವನ್ನು ಮುಂದುವರಿಸಲಿದ್ದಾರೆ.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ನಜೀರ್ ಪೊಲ್ಯ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ ಮತ್ತು ಸದಸ್ಯರು ಹಾಜರಿದ್ದರು. ಚೇತನ್ ಮಟಪಾಡಿ ಸ್ವಾಗತಿಸಿ  ಕಾರ್ಯಕ್ರಮ ನಿರೂಪಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version