ಹರ್ಷಿಕಾ ಪೂಣಚ್ಚ ದಂಪತಿಗೆ ಹಲ್ಲೆ ಪ್ರಕರಣ: ಇಬ್ಬರು ಅಪರಿಚಿತರ ವಿರುದ್ಧ ದೂರು ದಾಖಲು - Mahanayaka
9:42 AM Thursday 11 - September 2025

ಹರ್ಷಿಕಾ ಪೂಣಚ್ಚ ದಂಪತಿಗೆ ಹಲ್ಲೆ ಪ್ರಕರಣ: ಇಬ್ಬರು ಅಪರಿಚಿತರ ವಿರುದ್ಧ ದೂರು ದಾಖಲು

harshitha punach
23/04/2024

ಬೆಂಗಳೂರು: ಸ್ಯಾಂಡಲ್‌ವುಡ್ ನಟಿ ಹರ್ಷಿಕಾ ಪೂಣಚ್ಚ ಮತ್ತು ಅವರ ಪತಿ ಭುವನ್ ಪೊನ್ನಣ್ಣ ಅವರ ಮೇಲೆ ಬೆಂಗಳೂರಿನ ಫ್ರೇಜರ್ ಟೌನ್ ನಲ್ಲಿ ಹಲ್ಲೆ ನಡೆಸಿ ಸರಗಳ್ಳತನಕ್ಕೆ ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ಪುಲಕೇಶಿನಗರ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ವರದಿಯಾಗಿದೆ.


Provided by

ಹರ್ಷಿಕಾ ಪೂಣಚ್ಚ ಮತ್ತು ಅವರ ಪತಿ ಭುವನ್ ಪೊನ್ನಣ್ಣ ಮೇಲೆ ಹಲ್ಲೆ ಹಾಗೂ ದರ್ಪ ತೋರಿದ ಪ್ರಕರಣಕ್ಕೆ ಇಬ್ಬರು ಅಪರಿಚಿತರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಪುಲಕೇಶಿನಗರ ಠಾಣೆಯಲ್ಲಿ ಇಬ್ಬರ ವಿರುದ್ಧ ಐಪಿಸಿ ಸೆಕ್ಷನ್ 143, 341, 323, 393, 427, 504ರಡಿಯಲ್ಲಿ ದೂರು ದಾಖಲಾಗಿದೆ ಸದ್ಯ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದು, ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಘಟನೆ ಕುರಿತು ಹರ್ಷಿಕ ಪೂಣಚ್ಚ ಅವರು ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದರು. ಅವರು ಕೆಲವು ದಿನಗಳ ಹಿಂದೆ ಫ್ರೇಜರ್ ಟೌನ್ ಪ್ರದೇಶದ ಸಮೀಪವಿರುವ ಪುಲಿಕೇಶಿ ನಗರದ ಮಸೀದಿ ರಸ್ತೆಯಲ್ಲಿರುವ ಕರಾಮಾ ಎಂಬ ಹೋಟೆಲ್ ಗೆ ಹೋಗಿ ಊಟ ಮಾಡಿ ಬರುವಾಗ ಕೆಲವರಿಂದ ತೊಂದರೆ ಅನುಭವಿಸಿರುವುದಾಗಿ ಹೇಳಿದ್ದರು.

ಇಬ್ಬರು ವ್ಯಕ್ತಿಗಳು ಡ್ರೈವರ್ ಸೀಟ್ ಕಿಟಕಿಯ ಬಳಿ ಇದ್ದಕ್ಕಿದ್ದಂತೆ ಬಂದು, ನಿಮ್ಮ ವಾಹನವು ತುಂಬಾ ದೊಡ್ಡದಾಗಿದೆ, ಇದ್ದಕ್ಕಿದ್ದಂತೆ ಚಲಿಸಿದಲ್ಲಿ ಅದು ನಮಗೆ ತಾಗಬಹುದು ಎಂದು ಮಾತು ಆರಂಭಿಸಿ ಬಳಿಕ ಜಗಳ ಆರಂಭಿಸಿದ್ದರು. ಬಳಿಕ ಅವರ ಭಾಷೆಯಲ್ಲಿ ನಿಂದನೆ ಆರಂಭಿಸಿದ್ದರು. ಲೋಕಲ್ ಕನ್ನಡಿಗರಿಗೆ ಪಾಠ ಕಲಿಸಬೇಕು ಎಂದು ಹೇಳಿ ನನ್ನ ಪತಿಯ ಮುಖದ ಮೇಲೆ ಹೊಡೆಯಲು ಸಹ ಪ್ರಯತ್ನಿಸಿದ್ದರು.

ಭುವನ್ ಪೊನ್ನಣ್ಣ ಅವರ ಚಿನ್ನದ ಸರವನ್ನು ಕಿತ್ತುಕೊಳ್ಳಲು ಯತ್ನಿಸಿದರು. ಬಳಿಕ ವಾಹನಕ್ಕೂ ಹಾನಿ ಮಾಡಿದರು ಸಾಮಾಜಿಕ ಜಾಲತಾಣಗಳಲ್ಲಿ ಬರೆದಿದ್ದರು.
ಇದಾದ ಬಳಿಕ ಈ ಘಟನೆ ವಿರುದ್ಧ ಜನರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

ಸೋಷಿಯಲ್ ಮೀಡಿಯಾದಲ್ಲಿ ಈ ಸುದ್ದಿ ವೈರಲ್ ಆಗಿತ್ತು. ರಾಜ್ಯ ಮಾತ್ರವಲ್ಲದೆ ರಾಷ್ಟ್ರಮಟ್ಟದ ಪತ್ರಿಕೆಗಳಲ್ಲೂ ಘಟನೆಯ ಕುರಿತು ವರದಿಯಾಗಿತ್ತು. ಇದೀಗ ಪೊಲೀಸರು ಈ ಘಟನೆ ಕುರಿತು ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆರಂಭದಲ್ಲಿ ಈ ಘಟನೆ ಕುರಿತು ದೂರು ನೀಡದೆ ಇರಲು ಭುವನ್ ಪೊನ್ನಣ್ಣ ನಿರ್ಧರಿಸಿದ್ದರು. ಬಳಿಕ ಇವರ ಆತ್ಮೀಯರು ನೀಡಿದ ಸಲಹೆಯ ಮೇರೆಗೆ ದೂರು ದಾಖಲಿಸಿದ್ದಾರೆ.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

 

ಇತ್ತೀಚಿನ ಸುದ್ದಿ