ವಿನೇಶ್‌ ಫೋಗಟ್‌ ಗೆ 4 ಕೋಟಿ ರೂ. ಬಹುಮಾನ ನೀಡಿ, ಅದ್ದೂರಿ ಸ್ವಾಗತಕ್ಕೆ ಸಿದ್ಧವಾದ ಹರ್ಯಾಣ - Mahanayaka
11:43 AM Tuesday 14 - October 2025

ವಿನೇಶ್‌ ಫೋಗಟ್‌ ಗೆ 4 ಕೋಟಿ ರೂ. ಬಹುಮಾನ ನೀಡಿ, ಅದ್ದೂರಿ ಸ್ವಾಗತಕ್ಕೆ ಸಿದ್ಧವಾದ ಹರ್ಯಾಣ

vinesh phogat
08/08/2024

ಚಂಡೀಗಢ: ಪ್ಯಾರಿಸ್‌ ಒಲಿಂಪಿಕ್ಸ್‌ ನಲ್ಲಿ ಕೇವಲ 100 ಗ್ರಾಂ ತೂಕ ಹೆಚ್ಚಳದ ಕಾರಣ ನೀಡಿ ವಿನೇಶ್‌ ಫೋಗಟ್‌ ಅವರನ್ನು ಅನರ್ಹಗೊಳಿಸಲಾಗಿದೆ. ಇದರಿಂದಾಗಿ ಇಡೀ ದೇಶ ಜನರು ನೊಂದಿದ್ದಾರೆ. ವಿದೇಶಿ ನೆಲದಲ್ಲಿ ಕಾಣದ ಕೈಗಳ ಆಟದ ಬಗ್ಗೆ ವ್ಯಾಪಕ ಆಕ್ರೋಶ ಕೂಡ ವ್ಯಕ್ತವಾಗಿದೆ. ಈ ಘಟನೆಯಿಂದ ನೊಂದು ವಿನೇಶ್ ಫೋಗಟ್ ಕುಸ್ತಿಗೆ ವಿದಾಯ ಹೇಳಿದ್ದಾರೆ.


Provided by

ಈ ನಡುವೆ ವಿನೇಶ್‌ ಫೋಗಟ್‌ ಅವರ ಸಾಧನೆಯನ್ನು ಗುರುತಿಸಿ ಹರಿಯಾಣ ಸರ್ಕಾರ 4 ಕೋಟಿ ರೂ. ಬಹುಮಾನ ಘೋಷಿಸಿದೆ. ಇದರೊಂದಿಗೆ ಒಲಿಂಪಿಕ್ಸ್‌ ಬೆಳ್ಳಿ ಪದಕ ವಿಜೇತೆ ಮಾದರಿಯಲ್ಲೇ ಅವರಿಗೆ ಭವ್ಯ ಸ್ವಾಗತ ಕೋರಲು ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ.

ಈ ಬಗ್ಗೆ ಎಕ್ಸ್‌ ಖಾತೆಯಲ್ಲಿ ಪೋಸ್ಟ್ ಮಾಡಿರುವ ಹರಿಯಾಣ ಸಿಎಂ ನಯಾಬ್‌ ಸಿಂಗ್‌ ಸೈನಿ, ಒಲಿಂಪಿಕ್ಸ್‌ ಫ್ರೀಸ್ಟೈಲ್‌ ಕುಸ್ತಿ ವಿಭಾಗದಲ್ಲಿ ಫೈನಲ್‌ ತಲುಪಿ ಇತಿಹಾಸ ನಿರ್ಮಿಸಿದ ವಿನೇಶ್‌ ಫೋಗಟ್‌ ಅವರನ್ನು ತವರಿನಲ್ಲಿ ಬೆಳ್ಳಿ ಪದಕ ವಿಜೇತರಾಗಿ ಗೌರವಿಸಲಾಗುವುದು ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಹರ್ಯಾಣ ಸರ್ಕಾರದ ಕ್ರೀಡಾ ನೀತಿಯ ಪ್ರಕಾರ ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕ ಗೆದ್ದವರಿಗೆ 6 ಕೋಟಿ ರೂ. ಬಹುಮಾನ ನೀಡಲಾಗುತ್ತದೆ. ಬೆಳ್ಳಿ ಗೆದ್ದವರಿಗೆ 4 ಕೋಟಿ ರೂಪಾಯಿ ನೀಡಲಾಗುತ್ತದೆ. ಕಂಚಿನ ಪದಕ ಗೆದ್ದವರಿಗೆ 2.5 ಕೋಟಿ ರೂಪಾಯಿ ನೀಡಲಾಗುತ್ತಿದೆ. ಇದೀಗ ಫೈನಲ್ ತಲುಪಿದ ವಿನೇಶ್ ಅವರಿಗೆ ಸೋತಿದ್ದರೂ ಬೆಳ್ಳಿಯ ಪದಕ ಸಿಗುತ್ತಿತ್ತು. ಅನರ್ಹತೆಗೊಂಡ ಹಿನ್ನೆಲೆ ಬೆಳ್ಳಿಯ ಪದಕ ವಿಜೇತೆ ಸ್ಥಾನ ಮಾನದೊಂದಿಗೆ ಅವರನ್ನು ಗೌರವಿಸಲು ಸಿದ್ಧತೆ ನಡೆಸಲಾಗುತ್ತಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ