6:21 AM Wednesday 21 - January 2026

ಜಾತಿಗೆ ಹೆದರಿ ನಾಲೆಗೆ ಹಾರಿ ಯುವ ಪ್ರೇಮಿಗಳು ಆತ್ಮಹತ್ಯೆ

20/11/2020

ಹಾಸನ: ಯುವ ಪ್ರೇಮಿಗಳಿಬ್ಬರ ಮೃತದೇಹವು ಹೇಮಾವತಿ ನಾಲೆಯಲ್ಲಿ ಪತ್ತೆಯಾಗಿದ್ದು, ಒಬ್ಬರನ್ನೊಬ್ಬರು ಬಟ್ಟೆಯಿಂದ ಕಟ್ಟಿಕೊಂಡು ನಾಲೆಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಾತಿಗೆ ಅಂಜಿ, ಇವರಿಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ನ.16 ರಂದು ಚನ್ನರಾಯಪಟ್ಟಣ ತಾಲ್ಲೂಕಿನ ಬಾಗೂರು ಬಳಿಯ ಹೇಮಾವತಿ ಕಾಲುವೆ ಸುರಂಗದ ಬಳಿ ಬೈಕ್ ನಿಲ್ಲಿಸಿ ಜೋಡಿ ನಾಪತ್ತೆಯಾಗಿತ್ತು. ಇದೀಗ ಇಬ್ಬರ ಮೃತದೇಹ ತುಮಕೂರು ಜಿಲ್ಲೆ ನೊಣವಿನಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪತ್ತೆಯಾಗಿದೆ.

ಚನ್ನರಾಯಪಟ್ಟಣ ತಾಲೂಕಿನ ಹಿರಿಸಾವೆ ಗ್ರಾಮದ ಸುಶ್ಮಿತ (18) ಹಾಗೂ ಮತಿಘಟ್ಟ ಗ್ರಾಮದ ರಮೇಶ್ (19) ಆತ್ಮಹತ್ಯೆಗೆ ಶರಣಾದವರಾಗಿದ್ದಾರೆ.   ಐಟಿಐ ಓದುತ್ತಿದ್ದ ರಮೇಶ್‌ ಹಾಗೂ ಪದವಿ ಓದುತ್ತಿದ್ದ ಸುಶ್ಮಿತಾ ಪರಸ್ಪರ ಪ್ರೀತಿಸುತ್ತಿದ್ದರು. ಇವರಿಬ್ಬರು ಒಂದು ವರ್ಷದಿಂದ ಪ್ರೀತಿಸುತ್ತಿದ್ದರು. ಇಬ್ಬರೂ ಸಹ ಬೇರೆ ಬೇರೆ ಜಾತಿಯಾಗಿದ್ದರಿಂದ ಮನೆಯಲ್ಲಿ ಮದುವೆಗೆ ವಿರೋಧ ಇತ್ತು. ಮನೆಯವರ ವಿರೋಧಕ್ಕೆ ಹೆದರಿ ಯುವಜೋಡಿ ಆತ್ಮಹತ್ಯೆ ಮಾಡಿಕೊಂಡಿದೆ.

ಇನ್ನೂ ಪ್ರೇಮಿಗಳು ತಾವಾಗಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೋ ಅಥವಾ ಇದು ವ್ಯವಸ್ಥಿತ ಕೊಲೆಯೋ  ಎಂಬ ಅನುಮಾನವೂ ವ್ಯಕ್ತವಾಗುತ್ತಿದ್ದು, ಈ ನಿಟ್ಟಿನಲ್ಲಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ‌.

ಇತ್ತೀಚಿನ ಸುದ್ದಿ

Exit mobile version