ಮಂಗಳೂರಿನಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾದ ಹಾಸನ ಮೂಲದ ಬೇಕರಿ ಮಾಲಿಕ

sucide
22/08/2023

ಎರಡು ಬೇಕರಿ ಅಂಗಡಿಯನ್ನು ಹೊಂದಿದ್ದ ಮಾಲಿಕ ಮನೆಯಲ್ಲಿ ನೇಣುಬಿಗಿದು ಸಾವಿಗೆ ಶರಣಾಗಿದ್ದಾರೆ ಎನ್ನಲಾದ ಘಟನೆ ಮಂಗಳೂರಿನ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕುತ್ತಾರು ಸಮೀಪದ ಶಾಂತಿಬಾಗ್ ಎಂಬಲ್ಲಿ ನಡೆದಿದೆ.

ಹಾಸನ ಜಿಲ್ಲೆ ಹಳೇಬೀಡು ರಸ್ತೆಯ ಬಲ್ಲೇನಹಳ್ಳಿ ನಿವಾಸಿ ರುದ್ರೇಶ್ (36) ಸಾವಿಗೀಡಾದವರಾಗಿದ್ದಾರೆ. ಇವರು ಪತ್ನಿ, ಮಕ್ಕಳೊಂದಿಗೆ ಶಾಂತಿಬಾಗ್ ಬಳಿಯ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಈ ಹಿಂದೆ ಸಂತೋಷನಗರ ಎಂಬಲ್ಲಿದ್ದವರು ಕೆಲ ದಿನಗಳ ಹಿಂದಷ್ಟೇ ಇಲ್ಲಿನ ಬಾಡಿಗೆ ಮನೆಗೆ ಬಂದಿದ್ದರು.

ಕುತ್ತಾರು ಹಾಗೂ ಯೆನೆಪೋಯ ಆಸ್ಪತ್ರೆ ಬಳಿ ಬೆಂಗಳೂರ್ ಅಯ್ಯಂಗಾರ್ ಬೇಕರಿಯನ್ನು ನಡೆಸುತ್ತಾ ಬಂದಿದ್ದರು. ಇಂದು ಬೆಳಗ್ಗೆ ಬೇಕರಿಯಿಂದ ಮನೆಗೆ ಚಹಾ ಕುಡಿಯಲೆಂದು ಬಂದವರು ವಾಪಸ್ಸು ಹೋಗಿರಲಿಲ್ಲ. ಮನೆಯಲ್ಲಿ ಪತಿ ರುದ್ರೇಶ್ ಒಂದು ಕೋಣೆಯಲ್ಲಿ ಮಲಗಿದ್ರೆ ಪತ್ನಿ ಹೇಮಲತಾ ಇನ್ನೊಂದು ಕೋಣೆಯಲ್ಲಿ ಮಲಗಿದ್ದರು. ಸಂಜೆ ಪತ್ನಿ ಹೇಮಲತಾ ನಿದ್ರೆಯಿಂದ ಎದ್ದಾಗ ಪತಿ ಏಳದೇ ಇರುವುದನ್ನು ಗಮನಿಸಿ ಬಾಗಿಲು ಮುರಿದು ನೋಡಿದಾಗ ರುದ್ರೇಶ್ ಕೋಣೆಯೊಳಗೆ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

Exit mobile version