ಕೊನೆಗೂ ಪ್ರಜ್ವಲ್ ರೇವಣ್ಣ ಅರೆಸ್ಟ್: ಏರ್ಪೋರ್ಟ್ ನಿಂದ ಬಂಧಿಸಿದ ಮಹಿಳಾ ಪೊಲೀಸ್ ಅಧಿಕಾರಿಗಳು

ಬೆಂಗಳೂರು: ಲೈಂಗಿಕ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎಸ್ ಐಟಿ ಅಧಿಕಾರಿಗಳು ನಿನ್ನೆ ತಡರಾತ್ರಿ 12:47ರ ಸುಮಾರಿಗೆ ಬಂಧಿಸಿದ್ದಾರೆ.
ಪ್ರಜ್ವಲ್ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆ ಎಸ್ ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.
ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ಆರೋಪ ಹೊತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಮಹಿಳಾ ಪೊಲೀಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಪ್ರಜ್ವಲ್ ರೇವಣ್ಣ ಏರ್ ಪೋರ್ಟ್‌ನಲ್ಲಿ ಪ್ರಕ್ರಿಯೆ ಮುಗಿಸಿ ಹೊರ ಬರುತ್ತಿದ್ದಂತೆ ಮಹಿಳಾ ಇನ್ಸ್ ಪೆಕ್ಟರ್ ಸಹಿತ ಇನ್ನಿತರ ಮಹಿಳಾ ಅಧಿಕಾರಿಗಳು ಪ್ರಜ್ವಲ್ ರೇವಣ್ಣನನ್ನು ಬಂಧಿಸಿ ಎಸ್ ಐಟಿ ಕಚೇರಿಗೆ ಕರೆ ತಂದರು.
ಏರ್ ಪೋರ್ಟ್‌ನಿಂದ ಎಸ್ ಐಟಿ ಕಚೇರಿಗೆ ಕರೆತರುವ ವೇಳೆ ಪೊಲೀಸರ ಬೊಲೆರೊ ವಾಹನದಲ್ಲಿ ಡ್ರೈವರ್ ಒಬ್ಬರನ್ನು ಬಿಟ್ಟರೆ ಇನ್ನೆಲ್ಲಾ ಅಧಿಕಾರಿಗಳು ಮಹಿಳೆಯರೇ ಆಗಿದ್ದರು. ಮಹಿಳೆಯರ ಮೇಲೆ ನಡೆಸಿದ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರದ ಆರೋಪಿ, ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣನನ್ನು ಮಹಿಳಾ ಅಧಿಕಾರಿಗಳೇ ಬಂಧಿಸಿ ಕರೆ ತಂದಿದ್ದು ವಿಶೇಷವಾಗಿತ್ತು.
ಎರಡು ಅತ್ಯಾಚಾರ ಪ್ರಕರಣ ಮತ್ತೊಂದು ಲೈಂಗಿಕ ದೌರ್ಜನ್ಯ ಪ್ರಕರಣದ ಬಗ್ಗೆ ನ್ಯಾಯಾಲಯದಲ್ಲಿ ಎಸ್ ಐಟಿ ಅಧಿಕಾರಿಗಳು ವಿವರಣೆ ನೀಡಲಿದ್ದು, ಹೀಗಾಗಿ ಪ್ರಜ್ವಲ್ ರೇವಣ್ಣ ಜಾಮೀನಿಗೆ ಅರ್ಜಿ ಸಲ್ಲಿಸಿದ್ರೂ ಜಾಮೀನು ಸಿಗೋದು ಬಹುತೇಕ ಅನುಮಾನವಾಗಿದೆ. ಈತನ್ಮಧ್ಯೆ ಎಸ್ ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣನನ್ನು ಹತ್ತು ದಿನಗಳ ಕಾಲ ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ. ಈಗಾಗಲೇ ಪ್ರಜ್ವಲ್ ರೇವಣ್ಣನ ಮೊಬೈಲ್ ಫೋನ್ ಅನ್ನು ಎಸ್ ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಇಂದು ರಿಟ್ರೈವ್ ಗೆ ಕಳಿಸಲಿದ್ದಾರೆ. ಇದರ ಜೊತೆಗೆ ಪ್ರಜ್ವಲ್ ರೇವಣ್ಣ ಬಳಿ ದೊರೆತ ದಾಖಲೆಗಳು ಹಾಗೂ ಲಗೇಜ್ ಗಳನ್ನು ಪರಿಶೀಲನೆ ನಡೆಸಲಿದ್ದಾರೆ.
ಇಂದು ಬೆಳಗ್ಗೆಯಿಂದಲೇ ಎಸ್ ಐಟಿಯಿಂದ ಪ್ರಜ್ವಲ್ ರೇವಣ್ಣನ ವಿಚಾರಣೆ ಶುರುವಾಗಲಿದ್ದು, ಆತನನ್ನು ಕೋರ್ಟ್‌ಗೆ ಹಾಜರುಪಡಿಸಲಿರೋ ಹಿನ್ನಲೆ ಪ್ರಾಥಮಿಕ ವಿಚಾರಣೆ ಮುಗಿಸಿಕೊಳ್ಳಲು ತಯಾರಿಯನ್ನು ಈಗಾಗಲೇ ಶುರು ಮಾಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97
ಫೇಸ್ ಬುಕ್ ಪೇಜ್ ಫಾಲೋ ಮಾಡಿ: https://www.facebook.com/profile.php?id=61556202767068