ಹಸು ಅಡ್ಡ ಬಂದು ಬೈಕ್ ಸ್ಕೀಡ್: ಗಂಭೀರ ಗಾಯಗೊಂಡಿದ್ದ ಶಿಕ್ಷಕಿ ಸಾವು - Mahanayaka
4:38 AM Thursday 10 - September 2026

ಹಸು ಅಡ್ಡ ಬಂದು ಬೈಕ್ ಸ್ಕೀಡ್: ಗಂಭೀರ ಗಾಯಗೊಂಡಿದ್ದ ಶಿಕ್ಷಕಿ ಸಾವು

death
13/08/2022

ಹಸುವೊಂದು ಅಡ್ಡ ಬಂದು ಬೈಕ್ ಸ್ಕಿಡ್ ಆದ ಪರಿಣಾಮ ಗಂಭೀರ ಗಾಯಗೊಂಡಿದ್ದ ಶಾಲಾ ಶಿಕ್ಷಕಿಯೋರ್ವಳು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಇಂದು ವಂಡ್ಸೆ ಸಮೀಪದ ಚಿತ್ತೂರು ಎಂಬಲ್ಲಿ ನಡೆದಿದೆ.

ಹೆಮ್ಮಾಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕಿ ಅಂಬಿಕಾ ಮೃತ ದುರ್ದೈವಿ. ಇವರು ಗುರುವಾರ ಪತಿಯೊಂದಿಗೆ ಬೈಕ್ ನಲ್ಲಿ ಶಾಲೆಗೆ ಹೋಗುತ್ತಿದ್ದರು. ಈ ವೇಳೆ ವಂಡ್ಸೆ ಗ್ರಾಮದ ರಾಜೇಶ್ವರಿ ಕಾಂಪ್ಲೆಕ್ಸ್ ಎದುರುಗಡೆ ದನ ಅಡ್ಡ ಬಂದ ಪರಿಣಾಮ ಬೈಕ್ ಸ್ಕೀಡ್ ಆಗಿತ್ತು. ಈ ವೇಳೆ ದಂಪತಿಗಳಿಬ್ಬರು ಬೈಕ್ ಸಮೇತ ರಸ್ತೆಗೆ ಬಿದ್ದಿದ್ದು, ಪತಿ ಶಿಕ್ಷಕ ಶ್ರೀಕಾಂತ್ ಸಣ್ಣಪುಟ್ಟ ಗಾಯದೊಂದಿಗೆ ಅಪಾಯದಿಂದ ಪಾರಾಗಿದ್ದರು. ಪತ್ನಿ ಅಂಬಿಕಾ ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.

ಪತಿ ಶ್ರೀಕಾಂತ್ ನಾವುಂದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿದ್ದು, ಪ್ರತಿದಿನ ಜೊತೆಯಲ್ಲಿಯೇ ಹೋಗುತ್ತಿದ್ದರು ಎನ್ನಲಾಗಿದೆ. ಇವರಿಗೆ ಒಂದೂವರೆ ವರ್ಷದ ಹೆಣ್ಣು ಮಗುವಿದೆ ಎಂದು ತಿಳಿದುಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti