2:27 AM Saturday 18 - October 2025

ಹೆಚ್ಚು ಮಕ್ಕಳನ್ನು ಪಡೆಯಿರಿ: ತಮಿಳುನಾಡು ಸಿಎಂ ಹೊಸ ಫರ್ಮಾನು

03/03/2025

ತಮಿಳುನಾಡಿನ ಜನರು ತಕ್ಷಣವೇ ಹೆಚ್ಚು ಮಕ್ಕಳನ್ನು ಹೊಂದುವಂತೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ ಯಶಸ್ವಿಯಾಗಿದ್ದ ಫ್ಯಾಮಿಲಿ ಪ್ಲ್ಯಾನಿಂಗ್‌ ಯೋಜನೆಗಳು ಈಗ ಮುಳುವಾಗಿದೆ ಎಂದು ಅವರು ಒತ್ತಿ ಹೇಳಿದರು. ಲೋಕಸಭಾ ಕ್ಷೇತ್ರ ಪುನರ್ವಿಂಗಡಣೆಯಲ್ಲಿ ಜನಸಂಖ್ಯೆ ಹೆಚ್ಚು ಆದ್ಯತೆ ಪಡೆಯುವ ವಿಷಯ ದಕ್ಷಿಣ ಭಾರತದ ರಾಜ್ಯಗಳಲ್ಲಿ ಆತಂಕ ಮೂಡಿಸಿದೆ.

ಜನಸಂಖ್ಯೆ ಆಧಾರಿತ ಗಡಿ ನಿರ್ಣಯವು ತಮಿಳುನಾಡಿನ ರಾಜಕೀಯ ಪ್ರಾತಿನಿಧ್ಯದ ಮೇಲೆ ಪರಿಣಾಮ ಬೀರಬಹುದು ಎಂದು ಸ್ಟಾಲಿನ್ ಎಚ್ಚರಿಸಿದರು ಹೀಗಾಗಿ ತಮಿಳುನಾಡಿನ ಜನತೆ ತಮ್ಮ ಮನವಿಯನ್ನು ಆಲಿಸುವಂತೆ ಕರೆ ನೀಡಿದ್ದಾರೆ.

ಬದಲಾಗುತ್ತಿರುವ ಜನಸಂಖ್ಯಾ ಸನ್ನಿವೇಶವನ್ನು ಪ್ರತಿಬಿಂಬಿಸುತ್ತಾ ಮಾತನಾಡಿದ ಸ್ಟಾಲಿನ್‌, “ಮೊದಲು, ನಾವು ಸಮಯ ತೆಗೆದುಕೊಂಡು ಮಗುವನ್ನು ಪಡೆಯಿರಿ ಎಂದು ಹೇಳುತ್ತಿದ್ದೆವು. ಆದರೆ ಈಗ ಪರಿಸ್ಥಿತಿ ಬದಲಾಗಿದೆ. ಆದ್ದರಿಂದ ತಕ್ಷಣ ಹೆಚ್ಚು ಮಕ್ಕಳನ್ನು ಪಡೆಯಿರಿ” ಎಂದಿದ್ದಾರೆ.
“ನಾವು ಕುಟುಂಬ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೆ ತಂದಿದ್ದೇವೆ. ಹೀಗಾಗಿ ಈಗ ನಾವು ಅಂತಹ ಪರಿಸ್ಥಿತಿಯನ್ನು ಎದುರಿಸುತ್ತಿದ್ದೇವೆ” ಎಂದರು.

ಕ್ಷೇತ್ರ ಪುನರ್ವಿಂಗಡಣೆಯ ವಿಷಯವನ್ನು ಚರ್ಚಿಸಲು, ಸ್ಟಾಲಿನ್ ಮಾರ್ಚ್ 5 ರಂದು ಸರ್ವಪಕ್ಷ ಸಭೆಯನ್ನು ಕರೆದಿದ್ದಾರೆ. ಎಲ್ಲರೂ ಒಟ್ಟಾಗಿ ಸೇರಿ ತಮಿಳುನಾಡಿನ ಭವಿಷ್ಯವನ್ನು ಪರಿಗಣಿಸಬೇಕೆಂದು ಹೇಳಿದ್ದಾರೆ. ತನ್ನ ಹಕ್ಕುಗಳನ್ನು ರಕ್ಷಿಸಲು ಪ್ರತಿಭಟಿಸಬೇಕಾದ ನಿರ್ಣಾಯಕ ಹಂತದಲ್ಲಿದೆ ಎಂದು ಅವರು ಹೇಳಿದರು.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ

Exit mobile version