ಧರ್ಮಸ್ಥಳ ಕೇಸ್ ನಿಂದ ಹಿರಿಯ ಅಧಿಕಾರಿಗಳು ಹಿಂದೆ ಸರಿದಿದ್ದಾರೆಯೇ?: ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ಏನು? - Mahanayaka
7:20 AM Saturday 22 - November 2025

ಧರ್ಮಸ್ಥಳ ಕೇಸ್ ನಿಂದ ಹಿರಿಯ ಅಧಿಕಾರಿಗಳು ಹಿಂದೆ ಸರಿದಿದ್ದಾರೆಯೇ?: ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ಏನು?

g parameshwar
21/07/2025

ಬೆಂಗಳೂರು: ಧರ್ಮಸ್ಥಳ ಸರಣಿ ಹತ್ಯೆ ಆರೋಪಕ್ಕೆ ಸಂಬಂಧಿಸಿದಂತೆ ಎಸ್ ಐಟಿ ತಂಡ ರಚನೆ ಮಾಡಿದ ಬೆನ್ನಲ್ಲೇ ಪ್ರಕರಣದ ತನಿಖೆಯಿಂದ ಇಬ್ಬರು ಅಧಿಕಾರಿಗಳು ಹಿಂದೆ ಸರಿದಿದ್ದಾರೆ ಎಂದು ಕೆಲವು ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಹರಡಿತ್ತು. ಇದೀಗ ಈ ಸಂಬಂಧ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.

ಸೋಮವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಡಾ.ಜಿ.ಪರಮೇಶ್ವರ್, ಎಸ್ ಐಟಿ ತಂಡದಿಂದ ಕೆಲವು  ಅಧಿಕಾರಿಗಳು ವೈಯಕ್ತಿಕ ಕಾರಣಗಳಿಂದ ಹೊರಗುಳಿದಿದ್ದಾರೆ ಎನ್ನುವ ಮಾಧ್ಯಮಗಳಖ ಸುಳ್ಳು ವರದಿಯನ್ನು ತಳ್ಳಿ ಹಾಕಿದರು.

ಆ ರೀತಿಯ ಯಾವುದೇ ಬೆಳವಣಿಗೆ ನಡೆದಿಲ್ಲ. ಅವರೆಲ್ಲ ಜವಾಬ್ದಾರಿಯುತ ಸ್ಥಾನದಲ್ಲಿರುವ ಹಿರಿಯ ಅಧಿಕಾರಿಗಳು, ಅವರು ತಮ್ಮ ಕೆಲಸವನ್ನು ಮಾಡುತ್ತಾರೆ. ಇನ್ನೂ ನಾನಾಗಲಿ ಸರ್ಕಾರವಾಗಲಿ ನಾವು ಬರುವುದಿಲ್ಲ ಎಂದು ಸ್ಪಷ್ಟಪಡಿಸಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ