ಗ್ರಾಮ ಪಂಚಾಯಿತಿ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ - Mahanayaka

ಗ್ರಾಮ ಪಂಚಾಯಿತಿ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ

grama panchayat
20/07/2024


Provided by

ಹಾವೇರಿ ಜಿಲ್ಲೆ ಪಂಚಾಯತ್ ವ್ಯಾಪ್ತಿಯಲ್ಲಿ ಬರುವಂತಹ 6 ತಾಲೂಕಿನ ಗ್ರಾಮ ಪಂಚಾಯಿತಿಯ, ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳಲ್ಲಿ ಖಾಲಿ ಇರುವ ಮೇಲ್ವಿಚಾರಕರ (Supervisor) ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಿದೆ.

ಹಾವೇರಿ ಜಿಲ್ಲೆಯಾದ್ಯಂತ ಒಟ್ಟು 18 ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಿರುವ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಇನ್ನೂ 10 ದಿನಗಳ ಕಾಲಾವಕಾಶ ಇದ್ದು, ಆಸಕ್ತರು ಬೇಗನೆ ಅರ್ಹತೆಗಳನ್ನು ತೆಗೆದುಕೊಂಡು ಅರ್ಜಿ ಸಲ್ಲಿಸಿ.

Haveri Gram Panchayat Recruitment 2024 : ಹಾವೇರಿ ಜಿಲ್ಲೆಯ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಆರು ತಾಲೂಕುಗಳ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕೆಳಗಿನ ಅರ್ಹತೆಗಳನ್ನು ಹೊಂದಿರಬೇಕು.

ಶೈಕ್ಷಣಿಕ ಅರ್ಹತೆಗಳು : ಅರ್ಜಿ ಸಲ್ಲಿಸುವವರು ಮಾನ್ಯತೆ ಪಡೆದರು ಶಿಕ್ಷಣ ಸಂಸ್ಥೆಯಿಂದ ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು ಹಾಗೂ ಇದರ ಜೊತೆಗೆ ಅರ್ಜಿ ಸಲ್ಲಿಸುವವರು ಸರ್ಟಿಫಿಕೇಷನ್ ಇನ್ ಲೈಬ್ರರಿ ಕೋರ್ಸನ ಪ್ರಮಾಣ ಪತ್ರ ಹೊಂದಿರಬೇಕು. ಕಂಪ್ಯೂಟರ್ ಜ್ಞಾನವನ್ನು ಹೊಂದಿದ್ದು ವೃತ್ತಿ ಅನುಭವ ಇರುವವರಿಗೆ ಆದ್ಯತೆ ನೀಡಲಾಗುತ್ತದೆ.

Age Limit And Relaxation :

ಅರ್ಜಿ ಸಲ್ಲಿಸುವಂಥವರು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷದ ವಯೋಮಿತಿಯಲ್ಲಿರಬೇಕು. ಮೀಸಲಾತಿ ವ್ಯಾಪ್ತಿಯಲ್ಲಿ ಬರುವವರಿಗೆ ಈ ಕೆಳಗಿನಂತೆ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುತ್ತದೆ.
* 2a, 2b, 3a, 3b ವರ್ಗದ ಅಭ್ಯರ್ಥಿಗಳಿಗೆ 3 ವರ್ಷ
* SC, ST, Cat – 1 ವರ್ಗದ ಅಭ್ಯರ್ಥಿಗಳಿಗೆ 5 ವರ್ಷ

ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ :

* ಸಾಮಾನ್ಯ ವರ್ಗದವರು 500 ರೂಪಾಯಿ ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ ಪಾವತಿಸಬೇಕು.
* 2a, 2b, 3a, 3b ವರ್ಗದ ಅಭ್ಯರ್ಥಿಗಳು 300 ರೂಪಾಯಿ ಅರ್ಜಿ ಶುಲ್ಕ ಪಾವತಿಸಬೇಕು.
* SC, ST, Cat – 1 ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳ 200 ರೂಪಾಯಿ ಪಾವತಿಸಬೇಕು.
* ಅಂಗವಿಕಲ ಅಭ್ಯರ್ಥಿಗಳು ನೂರು ರೂಪಾಯಿ ಅರ್ಜಿ ಶುಲ್ಕವನ್ನು ಪಾವತಿಸಬೇಕು.

ನೇಮಕಾತಿಗೆ ನಿಗದಿಪಡಿಸಿದ ಪ್ರಮುಖ ದಿನಾಂಕಗಳು:

* ಅರ್ಜಿ ಸಲ್ಲಿಸಲು ಆರಂಭ – 15 ಜುಲೈ 2024
* ಅರ್ಜಿ ಸಲ್ಲಿಸಲು ಮುಕ್ತಾಯ – 31 ಜುಲೈ 2024

ಅರ್ಜಿ ಸಲ್ಲಿಸುವ ಡೈರೆಕ್ಟ ಲಿಂಕ್ : https://haveri.nic.in


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ