ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಗಳು, ರಾಜಿ ಪಂಚಾಯತಿ ನಡೆಸಿದವರು ಸೇರಿದಂತೆ ನಾಲ್ವರ ಬಂಧನ

stop rape
07/06/2025

ಹಾವೇರಿ: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳು ಹಾಗೂ  ರಾಜಿ ಪಂಚಾಯತಿ ನಡೆಸಿದ ಇಬ್ಬರು ಸೇರಿದಂತೆ ಒಟ್ಟು ನಾಲ್ವರನ್ನು  ಹಾವೇರಿ ಜಿಲ್ಲೆಯ ಬಂಕಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಗೋಣಿರುದ್ರಾ ಶಿಗ್ಗಟ್ಟಿ (24), ಮಂಜುನಾಥ ಶಿಗ್ಗಟ್ಟಿ (23), ಲಕ್ಷ್ಮಣ ಕಬನೂರ ಹಾಗೂ ಮಾರುತಿ ಶಿಗಟ್ಟಿ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಬಂಧಿತ ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಒಬ್ಬ ಆರೋಪಿ ತಲೆಮರೆಸಿಕೊಂಡಿದ್ದಾನೆ. ಆತನ ಪತ್ತೆಗಾಗಿ ಪೊಲೀಸರು ಬಲೆಬೀಸಿದ್ದಾರೆ.

ಅಪ್ರಾಪ್ತೆ ಮೇಲೆ ಯುವಕರು ಲೈಂಗಿಕ ದೌರ್ಜನ್ಯ ನಡೆಸಿರುವ ಸಂಬಂಧ ನೊಂದ ಬಾಲಕಿಯ ತಾಯಿ ಜೂನ್ 2ರಂದು ದೂರು ನೀಡಿದ್ದರು. ಈ ಸಂಬಂಧ ಅತ್ಯಾಚಾರ ಹಾಗೂ ಪೋಕ್ಸೋ ಕಾಯ್ದೆಯಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ಬಂಕಾಪುರ ಪಿಎಸ್ ಐ ಲಿಂಗರಾಜ್ ನೇತೃತ್ವದ ತಂಡವು ಪ್ರಕರಣ ದಾಖಲಾದ ಬೆನ್ನಲ್ಲೇ ಆರೋಪಿಗಳನ್ನು ಬಂಧಿಸಿದ್ದಾರೆ. ತಲೆಮರೆಸಿಕೊಂಡಿರುವ ಆರೋಪಿಯ ಬಂಧನಕ್ಕಾಗಿ ಬಲೆಬೀಸಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version