ಹಾವೇರಿ: ಯುವತಿಯ ಹತ್ಯೆ ಪ್ರಕರಣ: ಮತ್ತಿಬ್ಬರು ಆರೋಪಿಗಳ ಬಂಧನ

ಹಾವೇರಿ: ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಪತ್ತೇಪುರ ಗ್ರಾಮದ ತುಂಗಾಭದ್ರ ನದಿಯ ಬಳಿ ಸ್ವಾತಿ ಎಂಬ ಯುವತಿಯ ಮೃತದೇಹ ಪತ್ತೆಯಾಗಿತ್ತು. ಮರಣೋತ್ತರ ಪರೀಕ್ಷೆ ವೇಳೆ ಸ್ವಾತಿ ಹತ್ಯೆಯಾಗಿರುವುದು ಬೆಳಕಿಗೆ ಬಂದಿತ್ತು.
ಘಟನೆಗೆ ಸಂಬಂಧಿಸಿದಂತೆ ತೀವ್ರ ತನಿಖೆ ನಡೆಸಿದ್ದ ಪೊಲೀಸರು ನಯಾಝ್ ಎಂಬ ಯುವಕನನ್ನು ಬಂಧಿಸಿದ್ದರು. ಇದೀಗ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿದ್ದಾರೆ. ಈ ಮೂಲಕ ಸ್ವಾತಿ ಕೊಲೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.
ಇದೀಗ ಬಂಧನಕ್ಕೊಳಗಾಗಿರುವ ಆರೋಪಿಗಳನ್ನು ವಿನಯ್ ಹಾಗೂ ದುರ್ಗಾಚಾರಿ ಎಂದು ಗುರುತಿಸಲಾಗಿದೆ. ಶುಕ್ರವಾರ ರಾತ್ರಿ ಪ್ರಮುಖ ಆರೋಪಿ ನಯಾಝ್ ನನ್ನು ಬಂಧಿಸಲಾಗಿತ್ತು. ಇದರ ಬೆನ್ನಲ್ಲೇ ತಲೆಮರೆಸಿಕೊಂಡಿದ್ದ ವಿನಯ್ ಹಾಗೂ ದುರ್ಗಾಚಾರಿಯನ್ನು ಪೊಲೀಸರು ಬಂಧಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BR3b3qhWZWaCzpD1m6N5uu