ಹಿಜಾಬ್ ನಿಷೇಧ ವಿಚಾರ: ವಿದ್ಯಾರ್ಥಿನಿಯರ ಅರ್ಜಿಯನ್ನು ವಜಾಗೊಳಿಸಿದ ಕೋರ್ಟ್ - Mahanayaka

ಹಿಜಾಬ್ ನಿಷೇಧ ವಿಚಾರ: ವಿದ್ಯಾರ್ಥಿನಿಯರ ಅರ್ಜಿಯನ್ನು ವಜಾಗೊಳಿಸಿದ ಕೋರ್ಟ್

26/06/2024


Provided by

ಹಿಜಾಬ್ ನಿಷೇಧವನ್ನು ಪ್ರಶ್ನಿಸಿ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ವಜಾಗೊಳಿಸಿದೆ. ಮುಂಬೈನ ಎಂ ಜಿ ಆಚಾರ್ಯ ಮತ್ತು ಡಿಕೆ ಮರಾಠೆ ಕಾಲೇಜಿನ ಒಂಬತ್ತು ವಿದ್ಯಾರ್ಥಿನಿಯರು ಈ ಅರ್ಜಿಯನ್ನು ಸಲ್ಲಿಸಿದ್ದರು.

ಕಾಲೇಜು ತೆಗೆದುಕೊಂಡ ನಿರ್ಧಾರದಲ್ಲಿ ಹಸ್ತಕ್ಷೇಪ ನಡೆಸಲು ಬಯಸುವುದಿಲ್ಲ ಎಂದು ನ್ಯಾಯಮೂರ್ತಿಗಳಾದ ಎಸ್ ಚಂದುರ್ಕರ್ ಮತ್ತು ರಾಜೇಶ್ ಪಾಟೀಲ್ ಅವರ ಪೀಠ ಹೇಳಿದೆ. ಕಾಲೇಜುಗಳು ತಮ್ಮ ಕ್ಯಾಂಪಸ್ನಲ್ಲಿ ಹಿಜಾಬ್ ನಿಷೇಧಿಸಿ ಇತ್ತೀಚಿಗೆ ಅಧಿಸೂಚನೆ ಹೊರಡಿಸಿತ್ತು. ಆನಂತರ ಎರಡನೇ ಮತ್ತು ಮೂರನೇ ವರ್ಷದ ವಿಜ್ಞಾನ ವಿಭಾಗದ ಕೆಲ ವಿದ್ಯಾರ್ಥಿನಿಯರು ನ್ಯಾಯಾಲಯದ ಬಾಗಿಲು ಬಡಿದಿದ್ದರು.

ಸಮಾನ ವಸ್ತ್ರ ಸಂಹಿತೆ ಹೊಂದುವ ನಿಟ್ಟಿನಲ್ಲಿ ಶಿಸ್ತು ಕಾಪಾಡಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕಾಲೇಜು ಆಡಳಿತ ಮಂಡಳಿ ಹೇಳಿತ್ತು. ಮಾತ್ರ ಅಲ್ಲ ಕೇವಲ ಮುಸ್ಲಿಂ ಸಮುದಾಯವನ್ನು ಈ ನಿಯಮ ಗುರಿಯಾಗಿಸಿಲ್ಲ ಎಂದು ಅದು ಸಮರ್ಥಿಸಿಕೊಂಡಿತ್ತು.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ