ಪ್ರಜ್ವಲ್ ಪ್ರಕರಣದ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ಹೆಚ್.ಡಿ.ದೇವೇಗೌಡ

ಬೆಂಗಳೂರು: ಪ್ರಜ್ವಲ್ ವಿರುದ್ಧ ಕ್ರಮ ತೆಗೆದುಕೊಳ್ಳುವುದರ ಬಗ್ಗೆ ತಕರಾರು ಇಲ್ಲ. ಆದರೆ ರೇವಣ್ಣ ವಿರುದ್ಧ ಆರೋಪ ಮಾಡಿರುವುದರ ಸತ್ಯ ಜನರಿಗೆ ಗೊತ್ತಿದೆ. ರೇವಣ್ಣ ಪ್ರಕರಣದ ಬಗ್ಗೆ ಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿದೆ. ಅದರ ಬಗ್ಗೆ ನಾನು ಪ್ರತಿಕ್ರಿಯೆ ಕೊಡುವುದಿಲ್ಲ. ಹಾಸನ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ಹೊರಗಡೆ ಹೋಗಿದ್ದಾರೆ ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿದ್ದಾರೆ.
ತಮ್ಮ 91ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮೊದಲ ಬಾರಿಗೆ ಪ್ರಜ್ವಲ್—ರೇವಣ್ಣ ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿದರು.
ಈ ಘಟನೆ ಬಗ್ಗೆ ಕುಟುಂಬದ ಪರವಾಗಿ ಹೆಚ್ಡಿ ಕುಮಾರಸ್ವಾಮಿ ಮಾತನಾಡಿದ್ದಾರೆ. ಕ್ರಮ ಕೈಗೊಳ್ಳುವುದು ಸರ್ಕಾರದ ಜವಾಬ್ದಾರಿ ಎಂದು ಹೇಳಿದ್ದಾರೆ. ಇದರಲ್ಲಿ ಅನೇಕ ಜನರಿದ್ದಾರೆ, ಅವರ ಹೆಸರನ್ನು ಹೇಳಲು ಹೋಗಲ್ಲ ಎಂದು ಅವರು ಹೇಳಿದರು.
ಅನ್ಯಾಯಕ್ಕೆ ಒಳಗಾಗಿರುವ ಸಂತ್ರಸ್ತೆಯರಿಗೆ ಪರಿಹಾರ ನೀಡಬೇಕು. ಈ ಎಲ್ಲ ವಿಚಾರಗಳನ್ನು ಕುಮಾರಸ್ವಾಮಿ ಬಿಡಿಸಿ ಬಿಡಿಸಿ ಹೇಳಿದ್ದಾರೆ. ಇದು ಯಾವ ರೀತಿ ನಡೆಯಿತು ಎಂದು ನಾನು ವಿಶ್ಲೇಷಣೆ ಮಾಡಲ್ಲ ಎಂದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97
ಫೇಸ್ ಬುಕ್ ಪೇಜ್ ಫಾಲೋ ಮಾಡಿ: https://www.facebook.com/profile.php?id=61556202767068