ಜೆಡಿಎಸ್ ಕಾರ್ಯಕರ್ತರಿಗೆ ಬಹಿರಂಗ ಪತ್ರ ಬರೆದ ಹೆಚ್.ಡಿ.ದೇವೇಗೌಡ: ಪತ್ರದಲ್ಲೇನಿದೆ?

hd devegowda
16/05/2024

ಬೆಂಗಳೂರು: ಜೆಡಿಎಸ್ ಕಾರ್ಯಕರ್ತರಿಗೆ  ಬಹಿರಂಗ ಪತ್ರ ಬರೆದಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಪಕ್ಷದ ಕಾರ್ಯಕರ್ತರಿಗೆ ಹಾಗೂ ಅಭಿಮಾನಿಗಳಿಗೆ ವಿಶೇಷ ಮನವಿ ಮಾಡಿಕೊಂಡಿದ್ದಾರೆ.

ಮೇ 18ರಂದು ಹೆಚ್.ಡಿ.ದೇವೇಗೌಡ ಅವರ 92ನೇ ಹುಟ್ಟುಹಬ್ಬವಿದೆ. ಆದರೆ ಈ ಬಾರಿ ದೇವೇಗೌಡರು ಹುಟ್ಟುಹಬ್ಬ ಆಚರಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ನೀವು ಇದ್ದಲ್ಲೇ ನನಗೆ ಶುಭ ಹಾರೈಸಿ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.

ಪತ್ರದಲ್ಲಿ ಇರೋದಿಷ್ಟು…

ಅಭಿಮಾನಿಗಳು ಹಾಗೂ ಜಾತ್ಯತೀತ ಜನತಾದಳ ಪಕ್ಷದ ಕಾರ್ಯಕರ್ತರಲ್ಲಿ ನನ್ನ ವಿನಂತಿ. ಇದೇ ತಿಂಗಳ 18ರಂದು ನಾನು 91 ವರ್ಷ ಪೂರೈಸಿ 92ನೇ ವರ್ಷಕ್ಕೆ ಪದಾರ್ಪಣೆ ಮಾಡುತ್ತಿದ್ದು, ಕಾರಣಾಂತರಗಳಿಂದ ನಾನು ಜನ್ಮದಿನ ಆಚರಣೆ ಮಾಡಿಕೊಳ್ಳುತ್ತಿಲ್ಲ. ಹೀಗಾಗಿ ತಾವೆಲ್ಲರೂ ಇದ್ದರಲ್ಲಿಯೇ ಹಾರೈಸಬೇಕಾಗಿ ಮನವಿ ಮಾಡಿಕೊಳ್ಳುತ್ತೇನೆ.

ಪ್ರಸಕ್ತ ನಡೆಯುತ್ತಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್​​​–ಬಿಜೆಪಿ (ಎನ್ ​​ಡಿಎ) ಅಭ್ಯರ್ಥಿಗಳ ಗೆಲುವಿಗೆ ಎಲ್ಲರೂ ಪ್ರಾಮಾಣಿಕವಾಗಿ ಶ್ರಮಿಸಬೇಕು ಹಾಗೂ ಪಕ್ಷದ ಸಂಘಟನೆಗೆ ಪ್ರತಿಯೊಬ್ಬರು ಬದ್ಧತೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಕೊರುತ್ತೇನೆ. ನಿಮ್ಮೆಲ್ಲರ ವಿಶ್ವಾಸಕ್ಕೆ ಆಭಾರಿಯಾಗಿದ್ದೇನೆ ಎಂದು ಧನ್ಯವಾದ ತಿಳಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಫೇಸ್ ಬುಕ್ ಪೇಜ್ ಫಾಲೋ ಮಾಡಿ: https://www.facebook.com/profile.php?id=61556202767068

ಇತ್ತೀಚಿನ ಸುದ್ದಿ

Exit mobile version