ಮತ್ತೆ ಐವರು ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಹೆಚ್.ಡಿ.ಕುಮಾರಸ್ವಾಮಿ - Mahanayaka

ಮತ್ತೆ ಐವರು ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಹೆಚ್.ಡಿ.ಕುಮಾರಸ್ವಾಮಿ

h d kumaraswamy
15/04/2023


Provided by

ಬೆಂಗಳೂರು: ಈಗಾಗಲೇ ಪ್ರಸಕ್ತ ವಿಧಾನಸಭೆ ಚುನಾವಣೆಯ ಜೆಡಿಎಸ್ ಅಭ್ಯರ್ಥಿಗಳ ಎರಡು ಪಟ್ಟಿಗಳನ್ನು ಬಿಡುಗಡೆ ಮಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಶನಿವಾರ ಮತ್ತೆ ಐವರು ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡಿದರು.

ಚಿತ್ರದುರ್ಗಕ್ಕೆ ವಿಧಾನ ಪರಿಷತ್ ನ ಮಾಜಿ ಸದಸ್ಯ ರಘು ಅಚಾರ್, ಮಡಿಕೇರಿಗೆ ಎನ್.ಎಂ.ಮುತ್ತಪ್ಪ, ಮೂಡಬಿದಿರೆಗೆ ಅಮರಶ್ರೀ, ವರುಣಾ ಕ್ಷೇತ್ರಕ್ಕೆ ಮಾಜಿ ಶಾಸಕ ಡಾ.ಭಾರತಿ ಶಂಕರ್, ಬಾಗಲಕೋಟೆ ಕ್ಷೇತ್ರಕ್ಕೆ ದೇವರಾಜ್ ಪಾಟೀಲ್ ಹಾಗೂ ಯಾದಗಿರಿ ಕ್ಷೇತ್ರಕ್ಕೆ ಮಾಜಿ ಸಚಿವ ಎ.ಬಿ.ಮಾಲಕರೆಡ್ಡಿ ಅವರು ಜೆಡಿಎಸ್ ಅಭ್ಯರ್ಥಿಗಳು ಎಂದು ಮಾಧ್ಯಮಗೋಷ್ಠಿಯಲ್ಲಿ ಮಾಜಿ ಮುಖ್ಯಮಂತ್ರಿಗಳು ಪ್ರಕಟಿಸಿದರು.

ಎನ್ ಆರ್ ಸಂತೋಷ್, ದೇವರಾಜ್ ಪಾಟೀಲ್ ಸೇರ್ಪಡೆ:

ಇದೇ ಸಂದರ್ಭದಲ್ಲಿ ಅರಸೀಕೆರೆ ವಿಧಾನಸಭೆ ಕ್ಷೇತ್ರದ ಎನ್ ಆರ್ ಸಂತೋಷ್ ಅವರು ಬಿಜೆಪಿ ತೊರೆದು ಜೆಡಿಎಸ್ ಪಕ್ಷವನ್ನು ಸೇರಿದರು. ಹಾಗೆಯೇ, ಬಾಗಲಕೋಟೆಯ ದೇವರಾಜ್ ಪಾಟೀಲ್ ಅವರು ಕಾಂಗ್ರೆಸ್ ತೊರೆದು ಪಕ್ಷಕ್ಕೆ ಸೇರಿದರು.

ಕುಮಾರಸ್ವಾಮಿ ಅವರು, ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು ಇಬ್ಬರೂ ನಾಯಕರಿಗೆ ಪಕ್ಷದ ಶಾಲು ಹೊದಿಸಿ ಬರಮಾಡಿಕೊಂಡರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ