ಹೆಚ್.ಡಿ.ಕುಮಾರಸ್ವಾಮಿ ಅವರೇ ಪೆನ್ ಡ್ರೈವ್ ಪಿತಾಮಹಾ: ಕೆ.ಎನ್. ರಾಜಣ್ಣ ವಾಗ್ದಾಳಿ - Mahanayaka

ಹೆಚ್.ಡಿ.ಕುಮಾರಸ್ವಾಮಿ ಅವರೇ ಪೆನ್ ಡ್ರೈವ್ ಪಿತಾಮಹಾ: ಕೆ.ಎನ್. ರಾಜಣ್ಣ ವಾಗ್ದಾಳಿ

h d kumaraswamy
25/05/2024

ಬೆಂಗಳೂರು: ಹೆಚ್.ಡಿ. ಕುಮಾರಸ್ವಾಮಿ ಅವರೇ ಪೆನ್ ಡ್ರೈವ್ ಪಿತಾಮಹಾ, ಮೊದಲು ಜೇಬಿನಿಂದ ಪೆನ್ ಡ್ರೈವ್ ತೆಗೆದು ತೋರಿಸಿದವರು ಅವರೇ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಆರೋಪಿಸಿದ್ದಾರೆ.


Provided by

ಸುದ್ದಿಗಾರರ ಜತೆಗೆ ಶನಿವಾರ ಮಾತನಾಡಿದ ಅವರು, ಪೆನ್ ಡ್ರೈವ್ ಬಗ್ಗೆ ನಮಗೆ ಏನೂ ಗೊತ್ತಿಲ್ಲ. ಕುಮಾರಸ್ವಾಮಿ ಅವರಿಂದಲೇ ಕಲಿಯಬೇಕು ಎಂದು ಚುಚ್ಚಿದರು.
ಕುಮಾರಸ್ವಾಮಿ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಅವರಿಗೆ ಬುದ್ಧಿಭ್ರಮಣೆ ಆಗಿದೆ ಎಂದು ವಾಗ್ದಾಳಿ ನಡೆಸಿದ ಅವರು, ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ವಿಡಿಯೊಗಳಿದ್ದ ಪೆನ್ ಡ್ರೈವ್ ಹಂಚಿದ್ದು ದೊಡ್ಡ ಅಪರಾಧ ಎಂದು ಹೇಳುತ್ತಿದ್ದಾರೆ. ಹಾಗಿದ್ದರೆ ಶಾಸಕ ರಮೇಶ ಜಾರಕಿಹೊಳಿಗೆ ಸಂಬಂಧಿಸಿದ ವಿಡಿಯೊ ಹಂಚಿದವರ ವಿರುದ್ಧ ಏಕೆ ಕ್ರಮ ಆಗಲಿಲ್ಲ? ಆ ವಿಡಿಯೊದಲ್ಲಿ ದಲಿತ ಹೆಣ್ಣು ಮಗಳಿದ್ದಳು ಅಲ್ಲವೆ ಎಂದು ಪ್ರಶ್ನಿಸಿದರು.

ದೇವೇಗೌಡರೇ ಪ್ರಜ್ವಲ್ ರೇವಣ್ಣನನ್ನು ವಿದೇಶಕ್ಕೆ ಕಳುಹಿಸಿದ್ದಾರೆ ಎಂಬ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿಯವರಿಗೆ ಎಲ್ಲ ಮಾಹಿತಿಯೂ ಇರುತ್ತದೆ. ಸುಳ್ಳು ಎಂದು ನಿರಾಕರಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.


Provided by

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಫೇಸ್ ಬುಕ್ ಪೇಜ್ ಫಾಲೋ ಮಾಡಿ: https://www.facebook.com/profile.php?id=61556202767068

ಇತ್ತೀಚಿನ ಸುದ್ದಿ