ನಾನೂ ದಾರಿತಪ್ಪಿದ್ದೇನೆ, ಪತ್ನಿ ನನ್ನನ್ನು ತಿದ್ದಿದ್ದಾಳೆ: ಮಹಿಳೆಯರ ಬಗ್ಗೆ ಹೇಳಿಕೆಗೆ ಕುಮಾರಸ್ವಾಮಿ ವಿಷಾದ

ಬೆಂಗಳೂರು: ಕಾಂಗ್ರೆಸ್ ನ ಗ್ಯಾರೆಂಟಿಗಳಿಂದ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ವಿಷಾಧ ವ್ಯಕ್ತಪಡಿಸಿರುವ ಮಾಜಿ ಸಿಎಂ, ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ(H.D. Kumaraswamy), ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ವಿಷಾದವನ್ನು ವ್ಯಕ್ತಪಡಿಸುತ್ತೇನೆ ಎಂದಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನಾಡಿನ ಜನತೆಗೆ ನಾನು ಹೇಳಿದ್ದು ಎಚ್ಚರಿಕೆಯಿಂದ ತೀರ್ಮಾನ ಮಾಡಿ ಅಂತ, ನಿಮ್ಮ ಬದುಕನ್ನು ಇವತ್ತು ಹಾಳು ಮಾಡುತ್ತಾರೆ. ಬದುಕು ಎಂದರೆ ಬೇರೆ ರೀತಿಯಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ನಾನೂ ದಾರಿ ತಪ್ಪಿದ್ದೇನೆ:
ಕೆಲವು ಬಾರಿ ನಾನು ದಾರಿ ತಪ್ಪಿದ್ದೇನೆ. ನಾನು ದಾರಿ ತಪ್ಪಿದ್ದಾಗ ನನ್ನ ಪತ್ನಿ ನನ್ನನ್ನು ತಿದ್ದಿದ್ದಾಳೆ. ಇದನ್ನು ನಾನು ವಿಧಾನ ಸಭೆಯಲ್ಲಿ ಕೂಡ ಹೇಳಿದ್ದೇನೆ. ನಿಮ್ಮ ರೀತಿ ನಾನು ಬದುಕಿಲ್ಲ ಎಂದು ಕಾಂಗ್ರೆಸ್ ನಾಯಕರಿಗೆ ಟಾಂಗ್ ಕೊಟ್ಟಿದ್ದಾರೆ.
ನಾನು ರಾಜ್ಯದ ಯಾವುದೇ ಮಹಿಳೆಗೆ ನೋವು ಮಾಡಿಲ್ಲ, ನನ್ನ ಹೇಳಿಕೆಯಿಂದ ಒಂದು ವೇಳೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth