ಮಂಡ್ಯದಲ್ಲಿ ಗೆಲುವಿನತ್ತ ಹೆಜ್ಜೆ ಹಾಕಿದ ಹೆಚ್.ಡಿ.ಕುಮಾರಸ್ವಾಮಿ - Mahanayaka

ಮಂಡ್ಯದಲ್ಲಿ ಗೆಲುವಿನತ್ತ ಹೆಜ್ಜೆ ಹಾಕಿದ ಹೆಚ್.ಡಿ.ಕುಮಾರಸ್ವಾಮಿ

h.d kumaraswamy
04/06/2024

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರು ಬರೋಬ್ಬರಿ 1 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಮುನ್ನಡೆ ಸಾಧಿಸುವ ಮೂಲಕ ಬಹುತೇಕ ಪ್ರಚಂಡ ಗೆಲುವನ್ನು ಖಚಿತಪಡಿಸಿಕೊಂಡಿದ್ದಾರೆ.


Provided by

ಕುಮಾರಸ್ವಾಮಿ ಅವರು 1 ಲಕ್ಷದ 45 ಸಾವಿರ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. 8ನೇ ಸುತ್ತಿನ ಮತಎಣಿಕೆ ಮುಕ್ತಾಯದ ಹೊತ್ತಿಗೆ ಎಚ್​​ ಡಿಕೆ 3,72,848 ಮತಗಳನ್ನು ಪಡೆದರೆ, ಪ್ರತಿಸ್ಪರ್ಧಿ ಹಾಗೂ ಕಾಂಗ್ರೆಸ್​ ಅಭ್ಯರ್ಥಿ ವೆಂಕಟರಮಣಗೌಡ ಅಲಿಯಾಸ್​ ಸ್ಟಾರ್​ ಚಂದ್ರು ಅವರು 2,27,809 ಮತಗಳನ್ನು ಪಡೆದಿದ್ದಾರೆ. ಬರೋಬ್ಬರಿ 1 ಲಕ್ಷದ 45 ಸಾವಿರದ ಅಂತರದೊಂದಿಗೆ ಎಚ್​ ಡಿಕೆ ಮಂಡ್ಯದ ಲೋಕಸಭೆ ಗೆಲುವಿನತ್ತ ಹೆಜ್ಜೆ ಹಾಕಿದ್ದಾರೆ.

ಗೆಲುವು ಖಚಿತವಾಗುತ್ತಿದ್ದಂತೆ ಮಾಜಿ ಸಿಎಂ ಎಚ್​ಡಿಕೆ ಬೆಂಗಳೂರಿನಿಂದ ಮಂಡ್ಯದತ್ತ ಹೊರಟಿದ್ದಾರೆ.  ಕಳೆದ 2019ರ ಲೋಕಸಭಾ ಚುನಾವಣೆಯಲ್ಲಿ ಕೇವಲ 1 ಸ್ಥಾನಕ್ಕೆ ಕುಸಿದಿದ್ದ ಜೆಡಿಎಸ್​ ಈ ಬಾರಿ ಪುಟಿದೇಳುವ ಲಕ್ಷಣಗಳು ಕಾಣುತ್ತಿವೆ. ಬಿಜೆಪಿ ಜತೆ ಕೈಜೋಡಿಸಿ ಸ್ಪರ್ಧಿಸಿರುವ ಮೂರು ಕ್ಷೇತ್ರಗಳಲ್ಲಿ ಜೆಡಿಎಸ್​ ಮುನ್ನಡೆ ಸಾಧಿಸಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ