ಹೆಚ್.ಡಿ.ಕುಮಾರಸ್ವಾಮಿ ಅವರ ತೋಟದ ಮನೆಗೆ ಚುನಾವಣಾ ಅಧಿಕಾರಿಗಳಿಂದ ದಾಳಿ: ಚಿಕನ್, ಮಟನ್ ಮತ್ತು ಬಿರಿಯಾನಿ ವಶಕ್ಕೆ!

ರಾಮನಗರ: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಬಿಡದಿ ಬಳಿಯ ಕೇತಗಾನಹಳ್ಳಿಯಲ್ಲಿರುವ ತೋಟದ ಮನೆಯಲ್ಲಿ ಏರ್ಪಡಿಸಿದ್ದ ಬಾಡೂಟ ಕಾರ್ಯಕ್ರಮಕ್ಕೆ ಚುನಾವಣಾಧಿಕಾರಿಗಳು ದಾಳಿ ನಡೆಸಿದ್ದಾರೆ.
ಹೆಚ್ಡಿ ಕುಮಾರಸ್ವಾಮಿಯವರ ತೋಟದ ಮನೆಯಲ್ಲಿ 250ಕ್ಕೂ ಹೆಚ್ಚು ಜನರಿಗಾಗಿ ಬಾಡೂಟ ತಯಾರಿಸಲಾಗಿತ್ತು. ಈ ವಿಚಾರ ತಿಳಿದ ಚುನಾವಣಾ ಅಧಿಕಾರಿಗಳು ಧಿಡೀರನೆ ದಾಳಿ ಮಾಡಿದ್ದು, ಚಿಕನ್, ಮಟನ್ ಮತ್ತು ಬಿರಿಯಾನಿ ಸೇರಿದಂತೆ ಹಲವು ಖಾದ್ಯಗಳನ್ನು ವಶಕ್ಕೆ ಪಡೆದಿದ್ದಾರೆ.
ಚುನಾವಣಾ ಸಮಯದಲ್ಲಿ ಬಾಡೂಟ ಆಯೋಜಿಸಿರುವ ಬಗ್ಗೆ ಚುನಾವಣಾ ಅಧಿಕಾರಿಗಳು ಎಫ್ ಐಆರ್ ದಾಖಲಿಸಲು ತಯಾರಿ ನಡೆಸಿದ್ದಾರೆ.
ಇನ್ನೂ ಘಟನೆ ಸಂಬಂಧ ಆಕ್ರೋಶ ವ್ಯಕ್ತಪಡಿಸಿರುವ ಹೆಚ್.ಡಿ.ಕುಮಾರಸ್ವಾಮಿ, ಕಾಂಗ್ರೆಸ್ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ. ತಹಶೀಲ್ದಾರ್ಗೆ ಪದೇ ಪದೇ ಕರೆ ಮಾಡಿ ಒತ್ತಡ ಹಾಕಿಸಿದ್ದಾರೆ. ನಮ್ಮ ಮನೆಯಲ್ಲಿ ಪರಿಶೀಲಿಸಿದ್ದಾರೆ ಅಲ್ಲಿ ಏನೂ ಸಿಕ್ಕಿಲ್ಲ ಎಂದಿದ್ದಾರೆ.
ಕಾಂಗ್ರೆಸ್ಗೆ ಕೆಪಿಸಿಸಿ ಕಚೇರಿ, ಬಿಜೆಪಿಗೆ ಕೇಶವ ಕೃಪಾ ಹೆಡ್ ಆಫೀಸ್ ಇದ್ದ ಹಾಗೆ, ನಮಗೆ ನಮ್ಮ ತೋಟದ ಮನೆ ಹೆಡ್ ಆಫೀಸ್. ನನಗೂ ತಲೆ ಇದೆ ಏನು ಮಾಡಬೇಕು ಅಂತ ಗೊತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth