ಸೋಮವಾರದವರೆಗೂ ಹೆಚ್.ಡಿ.ರೇವಣ್ಣಗೆ ಜೈಲೇ ಗತಿ: ವಿಚಾರಣೆ ಮುಂದೂಡಿದ ಕೋರ್ಟ್ - Mahanayaka
11:21 AM Monday 10 - November 2025

ಸೋಮವಾರದವರೆಗೂ ಹೆಚ್.ಡಿ.ರೇವಣ್ಣಗೆ ಜೈಲೇ ಗತಿ: ವಿಚಾರಣೆ ಮುಂದೂಡಿದ ಕೋರ್ಟ್

revanna
09/05/2024

ಬೆಂಗಳೂರು: ಸಂತ್ರಸ್ತೆಯ ಅಪಹರಣ ಪ್ರಕರಣವನ್ನು ಎದುರಿಸುತ್ತಿರುವ, ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಹೆಚ್.ಡಿ.ರೇವಣ್ಣ ಮೇ 13ರವರೆಗೂ ಜೈಲಿನಲ್ಲೇ ಕಳೆಯ ಬೇಕಿದೆ.

ಹೆಚ್.ಡಿ.ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ಇಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ  ನಡೆಯಿತು.

ವಿಶೇಷ ತನಿಖಾ ತಂಡ ಮತ್ತು ರೇವಣ್ಣ ಕಡೆಯ ವಾದವನ್ನು ಆಲಿಸಿದ ಕೋರ್ಟ್‌ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ.

ವಿಚಾರಣೆ ಸೋಮವಾರಕ್ಕೆ ಮುಂದೂಡಿಕೆಯಾದ ಕಾರಣ  ಮೇ 13ರವರೆಗೂ ಪರಪ್ಪನ ಅಗ್ರಹಾರದಲ್ಲೇ ರೇವಣ್ಣ ಇರಬೇಕಾಗುತ್ತದೆ.

ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಅಧಿಕಾರಿಗಳು ಹೆಚ್.ಡಿ.ರೇವಣ್ಣ ಅವರನ್ನು ಬಂಧಿಸಿತ್ತು. ಬೆಂಗಳೂರಿನ 17ನೇ ಎಸಿಎಂಎಂ ನ್ಯಾಯಾಲಯ ರೇವಣ್ಣಗೆ 7 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿತ್ತು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ