ಮಳೆ ಸಾಧ್ಯತೆ ಇಲ್ಲ: ಹೀಗಿದೆ ಕರ್ನಾಟಕದ ಹವಾಮಾನ ಮುನ್ಸೂಚನೆ

ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ. ಕಾಸರಗೋಡು, ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಹಗುರ ಮೋಡಗಳು ಆವರಿಸುವ ಸಾಧ್ಯತೆಗಳಿವೆ. ಮಳೆಯ ಸಾಧ್ಯತೆಗಳಿಲ್ಲ.
ಉತ್ತರ ಸುಮಾತ್ರ ಕರಾವಳಿಯಲ್ಲಿ ಉಂಟಾಗಿರುವ ತಿರುವಿಕೆಯು ಪ್ರಭಲಗೊಂಡು, ನವೆಂಬರ್ 26ರ ಸುಮಾರಿಗೆ ಚಂಡಮಾರುತವಾಗಿ ಶ್ರೀಲಂಕಾ ಕರಾವಳಿಗೆ ಅಪ್ಪಳಿಸುವ ಲಕ್ಷಣಗಳಿವೆ. ಅಲ್ಲಿಂ ದುರ್ಬಲಗೊಂಡು ಉತ್ತರಾಭಿಮುಖವಾಗಿ ಚಲಿಸಿ ತಮಿಳುನಾಡು, ಆಂದ್ರಾ ಕರಾವಳಿಗೆ ತಲಪುವ ನಿರೀಕ್ಷೆಯಿದೆ.
ಇದರ ಪ್ರಭಾವದಿಂದ ಕರ್ನಾಟಕದಲ್ಲಿ ನವೆಂಬರ್ 27ರಿಂದ ಡಿಸೆಂಬರ್ 2ರ ತನಕ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದ್ದರೂ, ನವೆಂಬರ್ 25ರ ತನಕ ಕಾದು ನೋಡಬೇಕಾಗಿದೆ. ಆಮೇಲೆ ಸ್ಪಷ್ಟತೆ ಸಿಗಬಹುದು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97