ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ್ ಟೇಬಲ್ ಹೃದಯಾಘಾತದಿಂದ ನಿಧನ - Mahanayaka
5:29 AM Thursday 23 - January 2025

ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ್ ಟೇಬಲ್ ಹೃದಯಾಘಾತದಿಂದ ನಿಧನ

jagannath
06/08/2022

ಕೊಣಾಜೆ:  ಕರ್ತವ್ಯ ನಿರತ ಹೆಡ್ ಕಾನ್ಸ್ ಟೇಬಲ್  ಹೃದಯಾಘಾತದಿಂದ ನಿಧನರಾದ ಘಟನೆ ನಡೆದಿದ್ದು, ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಅಸ್ವಸ್ಥರಾಗಿದ್ದ ಅವರು  ಮೃತಪಟ್ಟಿದ್ದಾರೆ.

ಕೊಣಾಜೆ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸವಣೂರಿನ ಜಗನ್ನಾಥ(44) ನಿಧನರಾದವರು. ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಏಕಾಏಕಿ ಅಸ್ವಸ್ಥರಾಗಿದ್ದ ಅವರನ್ನು ತಕ್ಷಣವೇ ಕಣಚೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮೃತರು ಕಡಬ ತಾಲೂಕಿನ ಸವಣೂರು ಗ್ರಾಮದವರಾಗಿದ್ದು, ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ