ಆಟೋ-ಬೈಕ್ ಮುಖಾಮುಖಿ ಡಿಕ್ಕಿ; ಸ್ಥಳದಲ್ಲೇ ಬೈಕ್ ಸವಾರ ಸಾವು - Mahanayaka
5:08 AM Tuesday 17 - November 2026

ಆಟೋ–ಬೈಕ್ ಮುಖಾಮುಖಿ ಡಿಕ್ಕಿ; ಸ್ಥಳದಲ್ಲೇ ಬೈಕ್ ಸವಾರ ಸಾವು

praveen
25/10/2026

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಳೆಕೋಟೆ ಗ್ರಾಮದ ಬಳಿ ಆಟೋ ಹಾಗೂ ಬೈಕ್ ನಡುವೆ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ಮೃತ ದುರ್ದೈವಿಯನ್ನು ಬೈಕ್ ಸವಾರ ಪ್ರವೀಣ್ (26) ಎಂದು ಗುರುತಿಸಲಾಗಿದೆ.

ಬೈಕ್ ವೇಗವಾಗಿ ಬಂದು ಆಟೋಗೆ ಡಿಕ್ಕಿ ಹೊಡೆದ ರಭಸಕ್ಕೆ ಆಟೋ ಸಂಪೂರ್ಣವಾಗಿ ಪಲ್ಟಿಯಾಗಿದೆ. ಡಿಕ್ಕಿಯ ತೀವ್ರತೆಗೆ ಬೈಕ್ ಸವಾರ ಪ್ರವೀಣ್ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.

ಈ ಕುರಿತು ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ