ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ: ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವು

25/03/2024
ಮೈಸೂರು: ಎರಡು ಬೈಕ್ ಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಹೆಳವರಹುಂಡಿ ಬಳಿ ನಡೆದಿದೆ.
ಗುಂಡ್ಲುಪೇಟೆ ತಾಲೂಕು ನಿವಾಸಿ ಬಿಳಿಗಿರಿ(30), ನರಸೀಪುರ ತಾಲೂಕಿನ ಆದಿಬೆಟ್ಟಳ್ಳಿ ಗ್ರಾಮದ ನಾಗರಾಜು(35) ಮೃತಪಟ್ಟವರಾಗಿದ್ದಾರೆ. ಘಟನೆಯಲ್ಲಿ ಬೈಕ್ ನ ಹಿಂಬದಿ ಸವಾರರಿಗೂ ಗಂಭೀರ ಗಾಯಗಳಾಗಿವೆ.
ಗಾಯಾಳುಗಳನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಟಿ.ನರಸೀಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth