ಕಾರು—ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಬಾಲಕಿ ಸ್ಥಳದಲ್ಲೇ ಸಾವು, ಮೂವರಿಗೆ ಗಂಭೀರ ಗಾಯ - Mahanayaka
11:59 PM Wednesday 10 - December 2025

ಕಾರು—ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಬಾಲಕಿ ಸ್ಥಳದಲ್ಲೇ ಸಾವು, ಮೂವರಿಗೆ ಗಂಭೀರ ಗಾಯ

chikkamagaluru
08/12/2025

ಚಿಕ್ಕಮಗಳೂರು:  ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬಾಲಕಿಯೊಬ್ಬಳು ಸ್ಥಳದಲ್ಲೇ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಕಟ್ಟೆ ತಿಮ್ಮನಹಳ್ಳಿ ತಿರುವಿನ ಬಳಿ ಭಾನುವಾರ ಸಂಜೆ ನಡೆದಿದೆ.

ಲಹರಿ (6) ಸ್ಥಳದಲ್ಲಿ ಮೃತಪಟ್ಟಿದ್ದು, ಮೃತಳ ಸಹೋದರಿ, ತಂದೆ, ತಾಯಿ ಸ್ಥಿತಿ ಗಂಭೀರವಾಗಿದೆ. ಪುನೀತ್ (37), ಚೈತ್ರ (34), ಸಿರಿ (8) ಅವರ ಸ್ಥಿತಿ ಗಂಭೀರವಾಗಿದ್ದು, ಗಾಯಾಳುಗಳನ್ನು ಚಿಕ್ಕಮಗಳೂರು ಮಲ್ಲೇಗೌಡ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪುನೀತ್ ಹೆಂಡತಿ ಮಕ್ಕಳು ಜತೆ ಬೈರಂಬುದಿಯಿಂದ ಅಂಬಳೆ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ