ಕೆ.ಎಸ್.ಆರ್.ಟಿ.ಸಿ. ಬಸ್ –ಲಾರಿಯ ನಡುವೆ ಮುಖಾಮುಖಿ ಡಿಕ್ಕಿ: ಪ್ರಯಾಣಿಕರಿಗೆ ಗಾಯ

ksrtc
24/11/2024

ಚಿಕ್ಕಮಗಳೂರು: ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ಲಾರಿಯ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾದ ಘಟನೆ ಕಳಸ ತಾಲೂಕಿನ ಕಗ್ಗನಾಳ ಬಳಿ ನಡೆದಿದೆ.

ಹೊರನಾಡಿನಿಂದ ಚಿಕ್ಕಮಗಳೂರಿಗೆ ಆಗಮಿಸುತ್ತಿದ್ದ ಸರ್ಕಾರಿ ಬಸ್ ಹಾಗೂ ಬಾಳೆಹೊನ್ನೂರಿನಿಂದ ಕಳಸಕ್ಕೆ ತೆರಳುತ್ತಿದ್ದ ಲಾರಿ ಕಗ್ಗನಾಳದ ಕಿರುಸೇತುವೆ ಬಳಿ   ಮುಖಾಮುಖಿ ಡಿಕ್ಕಿಯಾಗಿದೆ.

ಅಪಘಾತದ ಪರಿಣಾಮ ಒಂದು ಗಂಟೆಗೂ ಅಧಿಕ ಕಾಲ ಟ್ರಾಫಿಕ್ ಜಾಮ್ ಉಂಟಾಯಿತು. ಕಳಸ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಬಸ್ಸಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ

Exit mobile version