KSRTC ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ: ಇಬ್ಬರು ಚಾಲಕರ ಸಹಿತ 35 ಜನರಿಗೆ ಗಂಭೀರ ಗಾಯ - Mahanayaka
10:41 PM Saturday 18 - October 2025

KSRTC ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ: ಇಬ್ಬರು ಚಾಲಕರ ಸಹಿತ 35 ಜನರಿಗೆ ಗಂಭೀರ ಗಾಯ

ksrtc
20/05/2025

ಮೈಸೂರು: KSRTC  ಬಸ್ ಗಳೆರಡು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬಸ್ ಚಾಲಕರು ಸೇರಿದಂತೆ 35 ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ  ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಗೋಳೂರು ಗ್ರಾಮದ ವಿದ್ಯಾಪೀಠ ಬಳಿ ನಡೆದಿದೆ.


Provided by

ತಮಿಳುನಾಡಿನ ಕೊಯಮತ್ತೂರು ಕಡೆಯಿಂದ ಮೈಸೂರು ಕಡೆಗೆ ತೆರಳುತ್ತಿದ್ದ  KSRTC ಬಸ್ ಮತ್ತು ನಂಜನಗೂಡು ಮಾರ್ಗವಾಗಿ ಚಾಮರಾಜನಗರ ಕಡೆಗೆ ಹೋಗುತ್ತಿದ್ದ KSRTC ಬಸ್ ಮುಖಾಮುಖಿ ಡಿಕ್ಕಿಯಾಗಿವೆ.

ವಿಷಯ ತಿಳಿದು ಸ್ಥಳಕ್ಕೆ ನಂಜನಗೂಡು ಸಂಚಾರ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಗಾಯಾಳುಗಳನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ